ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿಗಾಗಿ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದ ಹೋರಾಟಗಾರರ ಮೇಲೆ ಬಾರಿಬಾರ್ಜ್ ಪ್ರಯೋಗಿಸಿರುವ ಸರ್ಕಾರ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ(BY Vijayeendra) ಒತ್ತಾಯಿಸಿದರು.
ಈ ಕುರಿತು ಸುವರ್ಣಸೌಧದ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಗುರುವಾರ ಮಾತವಾಡಿರುವ ಅವರು, ‘2ಎ ಪ್ರವರ್ಗದ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕುವ ದುರಾದ ಶದಿಂದ ಚಳುವಳಿ ವಿರತ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿದ್ದೇನೆ’ ಎಂದರು.
‘ಪ್ರಜಾಪ್ರಭುತ್ವದ ವ್ಯವಸ್ಥೆಯ ಮೇಲೆ ವಿಶ್ವಾಸವಿಲ್ಲವೆಂಬಂತೆ ನಡೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಹೋರಾಟಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ, ಮುಖ್ಯಮಂತ್ರಿಗಳು ಈ ಕೂಡಲೇ ವಂಚಮಸಾಲಿ ಸಮಾಜದ ಕ್ಷಮೆ ಯಾಚಿಸಿ, ದಬ್ಬಾಳಿಕ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಪರಮಪೂಜ್ಯ ಶ್ರೀ ಬಸವ ಜಯ ಮೈಯ್ಯಂಜಯ ಸ್ವಾಮೀಜಿ ನೇತೃತ್ವದಲ್ಲಿ ಸುವರ್ಣ ಸೌಧದ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸಮಾವೇಶ ಸ್ಥಳಕ್ಕೆ ಭೇಟಿ ನೀಡಿ ಹೋದಾಟಕ್ಕೆ ಈ ಮುಂಚೆ ಬೆಂಬಲ ಸೂಚಿಸಿದ್ದರು.
ಬೆಳಗಾವಿಯನ್ನು ಪ್ರತ್ಯೇಕಿಸುವ ಬಾಲಿದ ಹೇಳಿಕೆಗಳನ್ನು ಕರ್ನಾಟಕ ಸಹಿಸುವುದಿಲ್ಲ: CM Siddaramaiah