ಬೆಳಗಾವಿ : ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರತಿಭಟನಾ ಸಮಾವೇಶದಲ್ಲಿ ಹೈಡ್ರಾಮಾ ಸೃಷ್ಟಿಯಾಯೀತು.
ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪು ಬಟ್ಟೆ ಹಿಡಿದು ವೇದಿಕೆಯತ್ತ ನುಗ್ಗಲು ಯತ್ನಿಸಿದ್ದರು.
ಬೆಳಗಾವಿಯ ಸಿ.ಪಿ.ಎಡ. ಮೈದಾನದಲ್ಲಿ ಸಮಾವೇಶ ನಡೆಯುತ್ತಿದ್ದ ವೇಳೆ ಬಿಜೆಪಿ ಮಹಿಳೆ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಭಾಷಣವ ಸಂದರ್ಭದಲ್ಲಿ ಕಪ್ಪು ಬಟ್ಟೆ ಹಿಡಿದು ಪ್ರದರ್ಶನ ಮಾಡಲು ವೇದಿಕೆಯತ್ತ ನುಗ್ಗಲು ಬಿಜೆಪಿ ಮಹಿಳಾ ಕಾರ್ಯಕರ್ತರು ಯತ್ನಿಸುತ್ತಿದ್ದಂತೆ.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಘೋಷಣೆ ಕೂಗ್ತಿದ್ದಂತೆ ಕಾರ್ಯಕ್ರಮದಲ್ಲಿ ಗೊಂದಲ ಸೃಷ್ಟಿಯಾಗಿತ್ತು.
ಯಾರು ರೀ ಬೆಳಗಾವಿ ಎಸ್ಪಿ ಎಂದು ಸಿಎಂ ಸಿದ್ದರಾಮಯ್ಯ ಅವರು ಏರು ಧ್ವನಿಯಲ್ಲಿ ಅವಾಜ್ ಹಾಕಿದರು. ಆಗ ಬೆಳಗಾವಿ ಎಸ್ಪಿ ಡಾ. ಭೀಮಾಶಂಕರ ಎಸ್ ಗುಳೇದ ಐ.ಪಿ.ಎಸ. ಬದಲು ಸ್ಟೇಜಗೆ ಬಂದ ಏಡಿಷನಲ್ ಎಸ್ಪಿ ನಾರಾಯಣ ಭರಮನಿ ಅವರಿಗೆ ಕಪಾಲ ಮೋಕ್ಷ ಮಾಡಲು ಸಿಎಂ ಯತ್ನಿಸಿದರು.
ಇನ್ನು ವೇದಿಕೆ ಮೇಲಿದ್ದ ಆಯೋಜಕರು ಬಿಜೆಪಿ ವಿರುದ್ಧ ಘೋಷಣೆ ಹಾಕಿದರು ಅಷ್ಟರಲ್ಲಿ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ ಬಿಜೆಪಿ ಮಹಿಳಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಬಳಿಕ ವೇದಿಕೆಯಿಂದ ಇಳಿದು ಪರಿಸ್ಥಿತಿ ನೋಡಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ ತೆರಳಿದರು.
ಸಿಎಂ, ‘ನಮ್ಮ ಸಮಾವೇಶದ ಸ್ಥಳಕ್ಕೆ ಬಿಜೆಪಿ ಕಾರ್ಯಕರ್ತರನ್ನು ಹೇಗೆ ಬಿಟ್ರಿ ಎಂದು ಡಿಸಿಪಿ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದರು.
ವರದಿ : ರಾಜು ಮುಂಡೆ