Ad imageAd image

ಇಂದು ದಾವಣಗೆರೆ ಧನಿ ಶಾಮನೂರು ಶಿವಶಂಕರಪ್ಪ ನುಡಿನಮನ : ಖರ್ಗೆ, ಸಿಎಂ,ಡಿಸಿಎಂ ಭಾಗಿ

Bharath Vaibhav
ಇಂದು ದಾವಣಗೆರೆ ಧನಿ ಶಾಮನೂರು ಶಿವಶಂಕರಪ್ಪ ನುಡಿನಮನ : ಖರ್ಗೆ, ಸಿಎಂ,ಡಿಸಿಎಂ ಭಾಗಿ
WhatsApp Group Join Now
Telegram Group Join Now

ದಾವಣಗೆರೆ: ಇತ್ತೀಚೆಗೆ ನಿಧನರಾದ ಶಾಸಕ, ಮಾಜಿ ಸಚಿವ ಡಾ. ಶಾಮನೂರು ಶಿವಶಂಕರಪ್ಪ ಅವರ ನುಡಿ ನಮನ ಕಾರ್ಯಕ್ರಮ ಡಿಸೆಂಬರ್ 26ರಂದು ಬೆಳಗ್ಗೆ 10:15ಕ್ಕೆ ನಡೆಯಲಿದೆ.

ನೂರು ಎಕರೆ ಪ್ರದೇಶದಲ್ಲಿ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದೆ. ದಾವಣಗೆರೆಯ ಬಂಬೂ ಬಜಾರ್ ಮುಖ್ಯ ರಸ್ತೆಯಲ್ಲಿರುವ ಶ್ರೀ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು, ಭಾಗವಹಿಸಲಿದ್ದಾರೆ.

ಪಂಚಪೀಠಾಧೀಶ್ವರರು, ಸಿರಿಗೆರೆ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಹಲವು ಶ್ರೀಗಳು ಭಾಗವಹಿಸಲಿದ್ದಾರೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ನುಡಿ ನಮನ ಕಾರ್ಯಕ್ರಮ ಆರಂಭವಾಗಲಿದೆ.

13ನೇ ದಿನದ ಕಾರ್ಯದ ಅಂಗವಾಗಿ ನಗರದ ಅನೇಕ ಕಲ್ಯಾಣ ಮಂಟಪಗಳು ಸೇರಿದಂತೆ ವಿವಿಧೆಡೆ ಸಾರ್ವಜನಿಕರು, ಅಭಿಮಾನಿಗಳಿಗೆ ಭೋಜನದ ವ್ಯವಸ್ಥೆ ಮಾಡಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಿದ್ದರಾಮಯ್ಯ ಪುತ್ಥಳಿ ಅನಾವರಣ ಮಾಡುವರು. ಡಿ.ಕೆ. ಶಿವಕುಮಾರ್ ಸಾಕ್ಷ್ಯ ಚಿತ್ರ ಬಿಡುಗಡೆ ಮಾಡಲಿದ್ದಾರೆ. ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಪ್ರಭಾ ಮಲ್ಲಿಕಾರ್ಜುನ್ ಸ್ವಾಗತ ಮತ್ತು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕಿರು ಹೊತ್ತಿಗೆ ಬಿಡುಗಡೆ ಮಾಡಲಿದ್ದಾರೆ. ಬಿ.ಎಸ್. ಯಡಿಯೂರಪ್ಪ, ಕೆ.ಸಿ.ವೇಣುಗೋಪಾಲ್, ಜಗದೀಶ್ ಶೆಟ್ಟರ್, ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!