Ad imageAd image

ಬೆಳಗಾವಿ ಜಿಲ್ಲಾ ವಿಭಜನೆ ಬಗ್ಗೆ ಸಿಎಂ ಮಹತ್ವದ ಹೇಳಿಕೆ

Bharath Vaibhav
ಬೆಳಗಾವಿ ಜಿಲ್ಲಾ ವಿಭಜನೆ ಬಗ್ಗೆ ಸಿಎಂ ಮಹತ್ವದ ಹೇಳಿಕೆ
siddaramaiah
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕದಲ್ಲಿ 31 ಜಿಲ್ಲೆಗಳಿದ್ದವು. ನವೆಂಬರ್ 18, 2020ರಲ್ಲಿ ವಿಜಯನಗರ ಜಿಲ್ಲೆಯನ್ನು ಹೊಸದಾಗಿ ಮಾಡಿದ ಕಾರಣ ಸದ್ಯ 32 ಜಿಲ್ಲೆಗಳಿದ್ದಾವೆ. ಇದರ ನಡುವೆ ಕರ್ನಾಟಕದಲ್ಲಿ ಹೊಸ ಜಿಲ್ಲೆ ಉದಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸುಳಿವು ನೀಡಿದ್ದಾರೆ.

ಇಂದು ಗೌರಿಬಿದನೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನದ ಅಗತ್ಯವಿದ್ದರೆ ಅನುದಾನ ಒದಗಿಸಲಾಗುವುದು. ಕನ್ನಡದ ಅಭಿವೃದ್ಧಿಗೆ ಯಾವುದೇ ಕಾರಣಕ್ಕೂ ಅನುದಾನವಿಲ್ಲ ಎಂದು ಹೇಳುವುದಿಲ್ಲ ಎಂದರು.

ಬೆಳಗಾವಿಯಲ್ಲಿ ಮಾತ್ರ ಹೊಸ ಜಿಲ್ಲೆ ರಚಿಸುವ ಬಗ್ಗೆ ಬೇಡಿಕೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ಶಾಸಕರು, ಸಚಿವರು ಮಾತು ಸಂಸದರ ಸಭೆಯನ್ನು ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿರುವುದು ಈ ಭಾಗದ ಜನರಲ್ಲಿ ನಿರೀಕ್ಷೆ ಹುಟ್ಟುಹಾಕಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬೆಂಗಳೂರು ವಿಭಾಗಕ್ಕೆ ಸಂಬಂಧಿಸಿದಂತೆ 19 ರಂದು ಸಚಿವ ಸಂಪುಟ ನಡೆಯುತ್ತಿದೆ. ಅಲ್ಲಿ ಪ್ರಸ್ತಾಪವಾಗುವ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

WhatsApp Group Join Now
Telegram Group Join Now
Share This Article
error: Content is protected !!