ತುಮಕೂರು : ತಿಪಟೂರಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ಹೊಸ ಇತಿಹಾಸ ಸೃಷ್ಟಿಸಿದೆ.ಸೋಮವಾರ ನಡೆದ ಹರಾಜಿನಲ್ಲಿ ಕೊಬ್ಬರಿ ಧಾರಣೆಯು ಹಿಂದೆಂದೂ ಕಾಣದ ರೀತಿಯಲ್ಲಿ ಕ್ವಿಂಟಲ್‌ಗೆ ₹32,218 ಕ್ಕೆ ಟೆಂಡರ್ ಆಗುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ.
ಕಳೆದ ವರ್ಷದಿಂದ ತೆಂಗಿನಕಾಯಿ ಇಳುವರಿಯಲ್ಲಿ ಗಣನೀಯ ಪ್ರಮಾಣದ ಇಳಿಕೆಯಾಗಿದೆ.ಎಳನೀರು ಮತ್ತು ಹಸಿ ತೆಂಗಿನಕಾಯಿಗೆ ಮಾರುಕಟ್ಟೆಯಲ್ಲಿ ನಿರೀಕ್ಷೆಗೂ ಮೀರಿ ಬೇಡಿಕೆ ಬಂದಿರುವುದು ಕೊಬ್ಬರಿ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ.
ದಾಸ್ತಾನು ಕೊರತೆ: ಮಾರುಕಟ್ಟೆಯಲ್ಲಿ ಕೊಬ್ಬರಿ ದಾಸ್ತಾನು ಕಡಿಮೆಯಾಗಿರುವುದು ಬೆಲೆ ಏರಿಕೆಗೆ ಪ್ರಮುಖ ಪ್ರೇರಕ ಶಕ್ತಿಯಾಗಿದೆ.
ಮುಂದಿನ ದಿನಗಳ ನಿರೀಕ್ಷೆ:
ಸದ್ಯ ಕೊಬ್ಬರಿ ಬೆಲೆ ಏರುಗತಿಯಲ್ಲೇ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಬೇಡಿಕೆ ಮತ್ತು ಬೆಲೆ ಇನ್ನೂ ಹೆಚ್ಚಿನ ಮಟ್ಟಕ್ಕೆ ಏರಬಹುದು ಎಂದು ಮಾರುಕಟ್ಟೆ ತಜ್ಞರು ಅಂದಾಜಿಸಿದ್ದಾರೆ. ಇದು ಕೊಬ್ಬರಿ ಬೆಳೆಗಾರರಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ.




