ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಕರ್ನಲ್, ಮೇಜರ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ಅನಂತನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದಲ್ಲಿ ಅಡಗಿರುವ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕರ್ನಲ್ ಮನ್ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋಂಚಕ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಹಿಮನ್ಯುನ್ ಮುಜಾಮಿಲ್ ಭಟ್ ಅವರು ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದರು.
ಕರ್ನಲ್ ಮನ್ಪ್ರೀತ್ ಸಿಂಗ್ ಅವರು 19 ರಾಷ್ಟ್ರೀಯ ರೈಫಲ್ಸ್ (19 ಆರ್ಆರ್) ಘಟಕದ ಕಮಾಂಡಿಂಗ್ ಅಧಿಕಾರಿಯಾಗಿದ್ದರು ಮತ್ತು ಪ್ರತಿಷ್ಠಿತ ಸೇನಾ ಪದಕ (ಎಸ್ಎಂ) ಪುರಸ್ಕೃತರಾಗಿದ್ದಾರೆ. ರಾಷ್ಟ್ರೀಯ ರೈಫಲ್ಸ್ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇನೆಯ ಬಂಡಾಯ ನಿಗ್ರಹ ಪಡೆ.
ಹಿಮಯುನ್ ಮುಜಾಮಿಲ್ ಭಟ್ ಅವರ ತಂದೆ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ನ ನಿವೃತ್ತ ಇನ್ಸ್ಪೆಕ್ಟರ್ ಜನರಲ್ (ಐಜಿ) ಗುಲಾಮ್ ಹಸನ್ ಭಟ್ ಅವರು ತಮ್ಮ ಮಗನ ಪಾರ್ಥಿವ ಶರೀರದ ಮೇಲೆ ಪುಷ್ಪಾರ್ಚನೆ ಮಾಡಿದರು.