ಬೆಂಗಳೂರು: ಸಿಲಿಕಾನ್ ಸಿಟಿ ಜನರ ವೀಕೆಂಡ್ ಸ್ಪಾಟ್ ಆಗಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಇನ್ನಷ್ಟು ವನ್ಯಜೀವಿಗಳನ್ನು ಸೇರ್ಪಡೆಗೊಳಿಸಲು ರಾಜ್ಯ ಅರಣ್ಯ ಇಲಾಖೆ ಮುಂದಾಗಿದೆ.
ಈ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದು, ‘ಮುಂದಿನ ನಾಲ್ಕೈದು ತಿಂಗಳಲ್ಲಿ ಬೇಟೆ ಚೀತಾ, ಕ್ಯಾಪಚಿನ್ ಕೋತಿಗಳು ದಕ್ಷಿಣ ಅಮೆರಿಕಾದಿಂದ ಬರಲಿವೆ
ಮುಂದಿನ ವರ್ಷ ಚಿಂಪಾಂಜಿ, ಜಾಗ್ವಾರ್, ಪೂಮಾ ಸೇರಿ ಒಟ್ಟು 10 ವಿದೇಶಿ ವನ್ಯಜೀವಿಗಳನ್ನು ಬನ್ನೇರುಘಟ್ಟಕ್ಕೆ ತರಲಾಗುವುದು. ಇದರಿಂದ ಬನ್ನೇರುಘಟ್ಟ ಉದ್ಯಾನದ ಆಕರ್ಷಣೆ ಇನ್ನಷ್ಟು ಹೆಚ್ಚಲಿದೆ’ ಎಂದಿದ್ದಾರೆ
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ವಿದ್ಯುತ್ ಚಾಲಿತ ಸಫಾರಿ ಬಸ್‌ನ ಪ್ರಾಯೋಗಿಕ ಸಂಚಾರದ ಬಗ್ಗೆ ಮಾತನಾಡಿದ ಅವರು, ‘ಇಲ್ಲಿ ವನ್ಯಜೀವಿ ಸಫಾರಿಯಲ್ಲಿ ಹುಲಿ, ಸಿಂಹ, ಕರಡಿಗಳ ವೀಕ್ಷಣೆಗೆ ಡೀಸೆಲ್ ವಾಹನಗಳನ್ನು ಬಳಸಲಾಗುತ್ತಿದೆ.
ಈ ವಾಹನಗಳಿಂದ ಹೊರ ಹೊಮ್ಮುವ ಇಂಗಾಲದ ಪ್ರಮಾಣ ತಗ್ಗಿಸುವ ಉದ್ದೇಶದಿಂದ ದೇಶದಲ್ಲಿ ಮೊದಲ ಬಾರಿಗೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ವಾಹನ ಪರಿಚಯಿಸಲಾಗುತ್ತಿದೆ’ ಎಂದ ರು….