ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣ ಸಂಬಂಧ ರಾಜ್ಯಪಾಲರಿಗೆ ದೂರು ನೀಡಲಾಗಿತ್ತು. ದೂರಿನ ಬಳಿಕ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೂ ಅನುಮತಿ ನೀಡಿದ್ದಾರೆ. ಈಗ ಸಿದ್ದರಾಮಯ್ಯ ಬೆನ್ನಲ್ಲೇ, ಸಚಿವ ಎಂ.ಬಿ ಪಾಟೀಲ್ ವಿರುದ್ಧವೂ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ಕೆಐಡಿಬಿ ಭೂಮಿಯನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.
ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರಿಗೆ ಸಲ್ಲಿಸಿರುವಂತ ದೂರಿನಲ್ಲಿ ಕೆಐಡಿಬಿ ಭೂಮಿಯನ್ನು ಕಾನೂನು ಬಾಹಿರವಾಗಿ ಸಚಿವ ಎಂ.ಬಿ ಪಾಟೀಲ್ ಹಂಚಿಕೆ ಮಾಡಿದ್ದಾರೆ. ಈ ಪ್ರಕ್ರಿಯೆ ಕಾನೂನಿನ ಪ್ರಕಾರ ಆನ್ ಲೈನ್ ನಲ್ಲಿ ನಡೆಯಬೇಕಿತ್ತು. ಇದನ್ನು ಮೀರಿ ಕೈಗಾರಿಕೆ ನಡೆಸದ ಕಂಪನಿಗಳಿಗೆ ಎಂ.ಬಿ ಪಾಟೀಲ್ ಹಂಚಿಕೆ ಮಾಡಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ.
ವಸಂತನರಸಾಪುರ, ಬಿಡದಿ, ದೊಡ್ಡಬಳ್ಳಾಪುರ, ಕೋಲಾರದ ನರಸಾಪುರ, ದೊಡ್ಡಬಳ್ಳಾಪುರದ ಕೈಗಾರಿಕಾ ಪ್ರದೇಶಗಳಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ ಭೂಮಿಯನ್ನು ಎಂ.ಬಿ ಪಾಟೀಲ್ ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ. ಈ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.