ರಾಯಚೂರು : ಪ್ರೀತಿ, ಮದುವೆ ಹೆಸರಿನಲ್ಲಿ ವಂಚನೆ ಮಾಡಿದ ಆರೋಪದ ಮೇಲೆ ಇಂಜಿನಿಯರ್ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದೇವದುರ್ಗ ಮೂಲದ ಮಲ್ಲಿಕಾರ್ಜುನ್ ಎಂಬ ಇಂಜಿನಿಯರ್ ವಿರುದ್ಧ ಮದುವೆಯಾಗುತ್ತೇನೆ ಎಂದು ನಂಬಿಸಿ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿದ್ದಾನೆಂದು ಅತಿಥಿ ಶಿಕ್ಷಕಿ ಗಂಭೀರ ಆರೋಪ ಮಾಡಿದ್ದಾರೆ.




