Ad imageAd image

ಪಾಲಿಕೆ ಗದ್ದುಗೆ ಹಿಡಿಯಲು ಕಾಂಗ್ರೆಸ್- ಬಿಜೆಪಿ ರಣತಂತ್ರ

Bharath Vaibhav
ಪಾಲಿಕೆ ಗದ್ದುಗೆ ಹಿಡಿಯಲು ಕಾಂಗ್ರೆಸ್- ಬಿಜೆಪಿ ರಣತಂತ್ರ
WhatsApp Group Join Now
Telegram Group Join Now

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ 23ನೇ ಅವಧಿಗೆ ಮಹಾಪೌರ ಹಾಗೂ ಉಪಮಹಾಪೌರ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ಮಾರ್ಚ್ 15ರಂದು ಚುನಾವಣೆಗೆ ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ ದಿನಾಂಗ ನಿಗದಿ ಪಡಿಸಿ ಆದೇಶ ಹೊರಡಿಸಿದ್ದಾರೆ‌. ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಹೇಗಾದರೂ ಮಾಡಿ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ರಣತಂತ್ರ ರೂಪಿಸುತ್ತಿವೆ.

ಬಿಜೆಪಿ, ಕಾಂಗ್ರೆಸ್ ಎರಡು ಪಕ್ಷಗಳು ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರಲು ಅಗತ್ಯ ಇರುವ ಸದಸ್ಯ ಬಲವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ಕಾಂಗ್ರೆಸ್ ನಾಯಕರು ಮೂವರು ವಿಧಾನ ಪರಿಷತ್ ಸದಸ್ಯರನ್ನು ಬೆಳಗಾವಿ ನಗರಕ್ಕೆ ಕರೆತಂದು ಪಾಲಿಕೆ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಂಡು, ಬಿಜೆಪಿಯ ನಾಲ್ವರು ಮತ್ತು ಕೆಲ ಪಕ್ಷೇತರ ಸದಸ್ಯರನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡು ಪಾಲಿಕೆಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ.

ಇತ್ತ ಬಿಜೆಪಿ ಸದಸ್ಯರಾದ ಜಯಂತ್ ಜಾಧವ್, ಮಂಗೇಶ ಪವಾರ ಸದಸ್ಯತ್ವ ರದ್ದುಗೊಂಡಿರುವ ಹಿನ್ನೆಲೆ ಬಿಜೆಪಿ ಸದಸ್ಯರ ಬಲ 37 ರಿಂದ 35ಕ್ಕೆ ಕುಸಿದಿದೆ. ಆ ಹಿನ್ನೆಲೆಯಲ್ಲಿ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರನ್ನು ಮತದಾರರ ಪಟ್ಟಿಗೆ ಸೇರಿಸಿಕೊಂಡು ಬಹಳಷ್ಟು ಪೂರ್ವ ತಯಾರಿಯೊಂದಿಗೆ ಬಿಜೆಪಿ ಚುನಾವಣೆ ಅಖಾಡ ಸಿದ್ಧಪಡಿಸಿಕೊಂಡಿದೆ. ಮತ್ತೊಂದೆಡೆ ಪಕ್ಷೇತರ ಸದಸ್ಯರನ್ನು ತನ್ನಲ್ಲಿಯೇ ಉಳಿಸಿಕೊಳ್ಳಲು ಬಿಜೆಪಿ ನಾಯಕರು ಮಾಸ್ಟರ್ ಪ್ಲಾನ್ ರೂಪಿಸಿಕೊಂಡಿದ್ದಾರೆ.

ಅದೇ ರೀತಿ ಪಾಲಿಕೆಯಲ್ಲಿ ಪಕ್ಷೇತರರು ಸೇರಿ 21 ಸದಸ್ಯ ಬಲ ಹೊಂದಿರುವ ಕಾಂಗ್ರೆಸ್ ಈ ಬಾರಿ ಹೇಗಾದರೂ ಮಾಡಿ ಪಾಲಿಕೆ ವಶಕ್ಕೆ ಪಡೆಯಲು ಪ್ರಯತ್ನಿಸುತ್ತಿದೆ. ಇತ್ತ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಂತ್ರಗಾರಿಕೆಯಿಂದ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಪಕ್ಷೇತರ ಸದಸ್ಯರನ್ನು ತಮ್ಮತ್ತ ಸೆಳೆಯಲಾಗುತ್ತಿದೆ.

ಇನ್ನು ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಆಸೀಫ್ ಸೇಠ್, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ನಾಗರಾಜ್ ಜಾಧವ್, ಚನ್ನರಾಜ ಹಟ್ಟಿಹೊಳಿ, ಲಖನ್ ಜಾರಕಿಹೊಳಿ, ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸೇರಿದಂತೆ ಒಟ್ಟು 29 ಸದಸ್ಯ ಬಲ ಆಗಲಿದೆ. ಅಲ್ಲದೇ ಬಿಜೆಪಿಯ ನಾಲ್ವರು ಸದಸ್ಯರನ್ನು ತಮ್ಮತ್ತ ಸೆಳೆದುಕೊಳ್ಳಲು ಕೈ ನಾಯಕರು ಯತ್ನಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ‌.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!