Ad imageAd image

ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕಾಂಗ್ರೆಸ್ ಕುಮ್ಮಕ್ಕು : ಬಿ. ವೈ ವಿಜಯೇಂದ್ರ

Bharath Vaibhav
ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕಾಂಗ್ರೆಸ್ ಕುಮ್ಮಕ್ಕು : ಬಿ. ವೈ ವಿಜಯೇಂದ್ರ
BY VIJENDRA
WhatsApp Group Join Now
Telegram Group Join Now

ಬೆಂಗಳೂರು: ಪ್ರತಿಭಟನೆಗೆ ವೇದಿಕೆ ಹಾಕಲು ಅವಕಾಶ ಕೊಡುವುದಿಲ್ಲ; ಇದೇನು ಇವರ ಅಪ್ಪನ ಮನೆಯ ಸರಕಾರವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.

“ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ” ಎನ್ನುವ ಘೋಷವಾಕ್ಯದೊಂದಿಗೆ ಇಂದು ಬಾಗಲೂರು ಮುಖ್ಯ ರಸ್ತೆಯ ಕೌಂಟ್ರಿ ಕ್ಲಬ್ ಹತ್ತಿರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ. ಇಂಥ ಗೊಡ್ಡು ಬೆದರಿಕೆಗೆ ಹೆದರುವವರು ಬಿಜೆಪಿ ಕಾರ್ಯಕರ್ತರಲ್ಲ; ಇದನ್ನು ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರು ಅರ್ಥ ಮಾಡಿಕೊಳ್ಳಲಿ ಎಂದು ತಿಳಿಸಿದರು.

ಮನೆ ಕೆಡವಿದ್ದೇ ಕಾಂಗ್ರೆಸ್ ಸರಕಾರ. ಆದರೆ, ಕೆ.ಸಿ.ವೇಣುಗೋಪಾಲ್ ಅವರು ಬೆದರಿಸಿದ ತಕ್ಷಣ ಸಿದ್ದರಾಮಯ್ಯನವರು ತಮ್ಮ ಸಿಎಂ ಕುರ್ಚಿ ಕಳಕೊಳ್ಳುವ ಭೀತಿಯಿಂದ ಅಕ್ರಮ ವಲಸಿಗರಿಗೆ ಮನೆ ಕೊಡಲು ರಾಜ್ಯ ಸರಕಾರ ಮುಂದಾಗಿದೆ.

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಕುರ್ಚಿ ಕಸಿದುಕೊಳ್ಳಬೇಕೆಂಬ ಕಾರಣಕ್ಕಾಗಿ ಕೆ.ಸಿ.ವೇಣುಗೋಪಾಲ್ ಮೂಲಕ ಸಿಎಂಗೆ ಧಮ್ಕಿ ಹಾಕಿಸಿ ಅವರೂ ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟಿದ್ದಾರೆ ಎಂದು ಟೀಕಿಸಿದರು.

ಕೆ.ಸಿ.ವೇಣುಗೋಪಾಲ್ ಕರ್ನಾಟಕದ ಮುಖ್ಯಮಂತ್ರಿಯೇ? ಅಥವಾ ಸಿದ್ದರಾಮಯ್ಯ ಮುಖ್ಯಮಂತ್ರಿಯೇ ಎಂದು ಕರ್ನಾಟಕದ ಜನರು ಪ್ರಶ್ನಿಸುತ್ತಿದ್ದಾರೆ ಎಂದು ನುಡಿದರು. ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದಾರೆ.

ರಾಜ್ಯದಲ್ಲಿ 38 ಲಕ್ಷ ಜನರು ಮನೆಗಾಗಿ ಅರ್ಜಿ ಹಾಕಿದ್ದಾರೆ. ಡಾ. ಅಂಬೇಡ್ಕರ್ ಅವರ ಹೆಸರು ಹೇಳುವ ಮುಖ್ಯಮಂತ್ರಿಗಳು ಕಳೆದ ಎರಡೂವರೆ ವರ್ಷದಲ್ಲಿ ಕಾಂಗ್ರೆಸ್ ಸರಕಾರವು ಒಂದೇ ಒಂದು ಮನೆ ಕೊಟ್ಟಿಲ್ಲ ಎಂದು ದೂರಿದರು.

ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟದ್ದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪಿಸಿದರು. ಬಿಜೆಪಿ ಇದನ್ನು ಬಲವಾಗಿ ಖಂಡಿಸುತ್ತದೆ. ಇದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದರು.

ಕೋಗಿಲು ಅಕ್ರಮವಾಸಿಗಳಿಗೆ ಅಯೋಗ್ಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ನಲ್ಲಿ ನೀರಿನ ಸಂಪರ್ಕ, ವಿದ್ಯುತ್ ಸಂಪರ್ಕ ನೀಡಿದ್ದಾರೆ. ತಿಂಗಳಿಗೆ 2-3 ಲಕ್ಷ ಲಂಚ ವಸೂಲಿ ಮಾಡುತ್ತಿದ್ದರು ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಲಂಚ ಪಡೆದು ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಟೀಕಿಸಿದರು.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!