Ad imageAd image

ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್ : ಬೊಮ್ಮಾಯಿ

Bharath Vaibhav
BOMMAI
WhatsApp Group Join Now
Telegram Group Join Now

ಹಾವೇರಿ: ಸ್ವಾತಂತ್ರ್ಯ ಹೋರಾಟದಲ್ಲಿ ದಲಿತರ ಪಾತ್ರ ಬಹಳ ದೊಡ್ಡದಿದೆ. ಯಾವಾಗ ದಲಿತರು ಹಿಂದುಳಿದವರು ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರೋ ಬ್ರಿಟೀಷರು ತಮಗೆ ಉಳಿಗಾಲವಿಲ್ಲ ಎಂದು ತೀರ್ಮಾನಿಸಿದರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ಹಾವೇರಿಯಲ್ಲಿ ಛಲವಾದಿ ಸಮುದಾಯದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮೊದಲಿನಿಂದಲೂ ಅವಮಾನ ಮಾಡುತ್ತ ಬಂದಿದೆ.

ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದರು. ಮಹಾತ್ಮಾ ಗಾಂಧಿಜಿ ಪಕ್ಕ ಅಂಬೇಡ್ಕರ್ ಇರಬಾರದು ಅಂತ ಅವರ ಅಂತ್ಯ ಸಂಸ್ಕಾರಕ್ಕೆ ದೆಹಲಿಯಲ್ಲಿ ಜಾಗ ನೀಡದೇ ಅವಮಾನ ಮಾಡಿದವರು ಕಾಂಗ್ರೆಸ್ ನವರು ಎಂದು ಹೇಳಿದರು.

WhatsApp Group Join Now
Telegram Group Join Now
Share This Article
error: Content is protected !!