ಬೆಂಗಳೂರು : ರಾಜ್ಯ ಬಜೆಟ್ ಖಂಡಿಸಿ, ಜೆಡಿಎಸ್ ನಿಂದ ಚಾರ್ಜ್ ಶೀಟ್ ಬಿಡುಗಡೆ ಮಾಡಿದ್ದು, ಜೆಡಿಎಸ್ ಬಾಬು ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬಿಡುಗಡೆ ಮಾಡಲಾಯಿತು.
ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿ ಚಾರ್ಜ್ ಶೀಟ್ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಸರ್ಕಾರದ ಲೂಟಿ ಮತ್ತು ದಿವಾಳಿತನ ಸಾಲರಾಮಯ್ಯ ಎಂಬ ಕಿರುಹೊತ್ತಿಗೆಯನ್ನು ಜೆಡಿಎಸ್ ಬಿಡುಗಡೆ ಮಾಡಿದೆ.
ಸಾಲ ಎತ್ತುವುದನ್ನೇ ಬಂಡವಾಳ ಮಾಡಿಕೊಂಡಿರುವ ಸಾಲಗಾರ ಮುಖ್ಯಮಂತ್ರಿ @siddaramaiah, ಮಂಡಿಸಿದ 2026-27ನೇ ಸಾಲಿನ ಬಜೆಟ್ನಲ್ಲಿ 1.32 ಲಕ್ಷ ಕೋಟಿ ರೂ. ಸಾಲ ಮಾಡುವುದಾಗಿ ಘೋಷಿಸಿದ್ದಾರೆ.




