Ad imageAd image

ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ : ಡಿ.ಕೆ. ಶಿವಕುಮಾರ್

Bharath Vaibhav
ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ : ಡಿ.ಕೆ. ಶಿವಕುಮಾರ್
DKS
WhatsApp Group Join Now
Telegram Group Join Now

ಬೆಳ್ತಂಗಡಿ: “ಜನರ ಆತ್ಮಸಾಕ್ಷಿ ಮತಗಳಿಂದ 2028ರ ಚುನಾವಣೆಯಲ್ಲಿ ದ.ಕನ್ನಡ, ಉಡುಪಿ ಜೆಲ್ಲೆಯಲ್ಲಿ ಕಾಂಗ್ರೆಸ್ 10 ಕ್ಷೇತ್ರಗಳನ್ನು ಗೆಲ್ಲಲಿದೆ. ಆಮೂಲಕ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು.

“ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಈ ವರ್ಷವನ್ನು ಸಂಘಟನೆ ವರ್ಷವೆಂದು ಘೋಷಣೆ ಮಾಡಿದ್ದಾರೆ. ಜೈ ಬಾಪು, ಜೈ ಭೀಮ್ ಹಾಗೂ ಜೈ ಸಂವಿಧಾನ ಸಮಾವೇಶ ಮಾಡಿ, ಗಾಂಧೀಜಿ, ಅಂಬೇಡ್ಕರ್ ತತ್ವ ಸಿದ್ಧಾಂತ ಹಾಗೂ ಸಂವಿಧಾನ ರಕ್ಷಣೆಗೆ ಕರೆ ನೀಡಿದ್ದಾರೆ. ಇವುಗಳನ್ನು ನಾವು ಉಳಿಸಿ, ಬೆಳೆಸಿಕೊಂಡು ಹೋಗಬೇಕು” ಎಂದರು.

“ಕೇಂದ್ರ ಬಿಜೆಪಿ ನಾಯಕರು ಸಂಸತ್ತಿನಲ್ಲಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದರು. ಎಲ್ಲಾ ಧರ್ಮಗಳನ್ನು ಒಟ್ಟಾಗಿ ಸೇರಿಸಿಕೊಂಡು ಕೆಲಸ ಮಾಡುವುದೇ ಕಾಂಗ್ರೆಸ್ ಸಿದ್ಧಾಂತ. ಇಂದು ಕ್ರೈಸ್ತ ಬಾಂಧವರ ಈಸ್ಟರ್ ಹಬ್ಬ. ಈ ಸಂದರ್ಭದಲ್ಲಿ ಅವರಿಗೆ ಶುಭ ಕೋರುತ್ತೇನೆ.

ಸಮರ್ಪಣೆ, ಸಂಕಲ್ಪ, ಸಂಘರ್ಷ ಈ ಮೂರು ಅಂಶಗಳನ್ನು ಕಾಂಗ್ರೆಸ್ ಪಕ್ಷ ನಿಮ್ಮ ಮುಂದೆ ಇಟ್ಟಿದೆ. ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಈ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದು, ಎಲ್ಲರಿಗೂ ಅಭಿನಂದಿಸುತ್ತೇನೆ. ಇಲ್ಲಿ ಪ್ರತಿ ಬೂತ್ ನಲ್ಲಿ ಇಬ್ಬರು ಡಿಜಿಟಲ್ ಯೂಥ್ ನೇಮಕ ಮಾಡಲಾಗಿದೆ. ನಿಮ್ಮೆಲ್ಲರಿಗೂ ಅಭಿನಂದನೆಗಳು” ಎಂದರು.

“ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳು ಅಧಿಕಾರಕ್ಕೆ ಬಂದಂತೆ. ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುದಾಗ ಬಿಜೆಪಿ ನಾಯಕರು ಇದು ಸಾಧ್ಯವೇ ಎಂದು ಪ್ರಶ್ನಿಸಿದರು.

ನಾನು ಹಾಗೂ ಸಿದ್ದರಾಮಯ್ಯ ಅವರು ಪ್ರಿಯಾಂಕ ಗಾಂಧಿ ಅವರ ಸಮ್ಮುಖದಲ್ಲಿ ಗ್ಯಾರಂಟಿ ಚೆಕ್ ಗೆ ಸಹಿ ಹಾಕಿದೆವು. ನಮ್ಮ ಸರ್ಕಾರ ಬಂದ ನಂತರ 1.21 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತಲುಪಿದೆ. 200 ಯೂನಿಟ್ ವರೆಗೂ ಉಚಿತ ವಿದ್ಯುತ್, 10 ಕೆ.ಜಿ ಅಕ್ಕಿ, ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ ಸಿಗುತ್ತಿದೆ” ಎಂದು ಹೇಳಿದರು.

 

 

WhatsApp Group Join Now
Telegram Group Join Now
Share This Article
error: Content is protected !!