ಬೆಳಗಾವಿ: ನಗರದ ರಾಣಿ ಚೆನ್ನಮ್ಮ ಸರ್ಕಲ್ ಹತ್ತಿರ ಬೃಹತ್ ಪ್ರತಿಭಟನೆ ನಡೆಯಿತು ಸಿ.ಎಂ ಸಿದ್ಧರಾಮಯ್ಯ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭಾವಚಿತ್ರ ಇರುವ ಪ್ಲೇ ಕಾರ್ಡಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಅರ್ಧ ಗಂಟೆಗೂ ಹೆಚ್ಚುಕಾಲ ರಸ್ತೆ ತಡೆ ಮಾಡಿದರು ಪ್ರತಿಭಟನೆ ಉದ್ದೇಶಿಸಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ
ಕರ್ನಾಟಕದ ವಿಧಾನಸಭೆಯಲ್ಲಿ ವಿಧಾನ ಸಭಾಧ್ಯಕ್ಷರು ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿರುವುದು
ಸಂಪೂರ್ಣವಾಗಿ ಕಾನೂನುಬಾಹಿರ, ಅಸಾಂವಿಧಾನಾತ್ಮಕ, ಏಕಪಕ್ಷೀಯ ಹಾಗೂ ಮನಸೋಇಚ್ಛೆಯಿಂದ ತೆಗೆದುಕೊಂಡ ತೀರ್ಮಾನ ಹಾಗೂ
ಜನರಿಂದ ಆಯ್ಕೆಯಾದ ಶಾಸಕರಿಗೆ ಅಷ್ಟೇ ಅಲ್ಲದೆ ಕ್ಷೇತ್ರದ ಮತದಾರರಿಗೂ ಮಾಡಿದ ಅವಮಾನ ಎಂದು ಬಿಜೆಪಿ ಜಿಲ್ಲಾ ಘಟಕವು ತೀವ್ರವಾಗಿ
ಖಂಡಿಸುತ್ತದೆ.
ಶಾಸಕರ ಸಂವಿಧಾನ ದತ್ತ ಹಕ್ಕನ್ನು ಕಿತ್ತುಕೊಳ್ಳುವಂತಹ ಸಂವಿಧಾನ ಬಾಹಿರ ನಿರ್ಧಾರವನ್ನು ತೆಗೆದುಕೊಂಡ ವಿಧಾನಸಭಾ ಅಧ್ಯಕ್ಷರ
ನಿರ್ಧಾರವನ್ನು ಬಿಜೆಪಿ ಖಂಡಿಸುತ್ತದೆ. ವಿಧಾನ ಸಭಾಧ್ಯಕ್ಷರು ತಮ್ಮ ತೀರ್ಮಾನವನ್ನು ಮರು ಪರಿಶೀಲಿಸಿ ಅಮಾನತು ಆದೇಶವನ್ನು ಕೂಡಲೇ
ಹಿಂಪಡೆಯಬೇಕು ಎಂದು ಜಿಲ್ಲಾ ಬಿಜೆಪಿ ಆಗ್ರಹಪಡಿಸುತ್ತದೆ.
ಕಾಂಗ್ರೆಸ್ ಮತ್ತೊಮ್ಮೆ ತುಷ್ಟಿಕರಣದ ತನ್ನ ಹಳೇ ಚಾಳಿಯನ್ನು ಮುಂದುವರೆಸಿದೆ. ಸರಕಾರಿ ಕಾಮಗಾರಿಗಳಲ್ಲಿ ಶೇ 4ರಷ್ಟು ಮೀಸಲಾತಿ
ಮುಸ್ಲಿಂರಿಗೆ ನೀಡುವುದು, ಹೊರದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವ ಮುಸ್ಲಿಂ ವಿದ್ಯಾರ್ಥಿಗಳಿಗೆ ನೀಡುವ ಸಹಾಯಧನವನ್ನು 20 ಲಕ್ಷ ರೂಗಳಿಂದ
30 ಲಕ್ಷ ರೂಗಳಿಗೆ ಹೆಚ್ಚಳ ಮಾಡಿರುವುದು, ಶಾದಿ ಭಾಗ್ಯಕ್ಕೆ ಹಣ ನೀಡುವ ನಿರ್ಧಾರ ತೆಗೆದುಕೊಮಡಿರುವುದು ಮತ್ತು ಮುಸ್ಲಿಂ ಹೆಣ್ಣುಮಕ್ಕಳಿಗೆ
ಮಾತ್ರ ಆತ್ಮರಕ್ಷಣೆಗಾಗಿ ವಿಶೇಷ ಅನುದಾನವನ್ನು ನೀಡುವುದು, ಕಾಂಗ್ರೆಸ್‌ನ ತುಷ್ಟಿಕರಣದ ರಾಜಕಾರಣದ ಮುಂದುವರೆದ ಭಾಗವಾಗಿದೆ. ಕಾಂಗ್ರೆಸ್
ಸರಕಾರದ ನಿರ್ಧಾರವನ್ನು ಬಿಜೆಪಿ ಜಿಲ್ಲಾ ಘಟಕವು ತೀವ್ರವಾಗಿ ವಿರೋಧಿಸುತ್ತದೆ.
ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರವರು ರಚಿಸಿದ ಸಂವಿಧಾನದಲ್ಲಿ ಧರ್ಮ ಆಧಾರಿತ ಮೀಸಲಾತಿ ಕೊಡಲು ಅವಕಾಶವಿಲ್ಲ. ಇದಕ್ಕೆ
ಸಂಬಂಧ ಪಟ್ಟಂತೆ ಸುಪ್ರೀಂ ಕೋರ್ಟ್ ಸೇರಿ ವಿವಿಧ ಕೋರ್ಟ್‌ಗಳೂ ತೀರ್ಪು ಕೊಟ್ಟಿವೆ. ಆದರೂ ಈ ರೀತಿಯ ನಿರ್ಧಾರಗಳನ್ನು
ತೆಗೆದುಕೊಂಡಿರುವ ಕಾಂಗ್ರೆಸ್‌ನ ನಡೆ ಡಾ.ಅಂಬೇಡ್ಕರ್‌ರವರ ಸಂವಿಧಾನಕ್ಕೆ ಕಾಂಗ್ರೆಸ್ ಮಾಡಿದ ಅವಮಾನ. ಈ ರೀತಿಯ ನಿರ್ಧಾರಗಳನ್ನು
ತೆಗೆದುಕೊಂಡ ಕಾಂಗ್ರೆಸ್ ಹಿಂದೂಗಳ ಹಿತಕ್ಕೆ ವಿರುದ್ಧವಾಗಿ ಕಾರ್ಯ ಮಾಡುತ್ತಿದೆ. ಕೂಡಲೇ ಕಾಂಗ್ರೆಸ್ ಈ ನಿರ್ಧಾರಗಳಿಂದ ಹಿಂದಕ್ಕೆ
ಸರಿಯಬೇಕು. ಇಲ್ಲದಿದ್ದರೆ ಜಿಲ್ಲಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂಬ ಎಚ್ಚರಿಕೆಯನ್ನು ಜಿಲ್ಲಾ ಬಿಜೆಪಿ ಈ ಮೂಲಕ ನೀಡುತ್ತಿದೆ.
ಮಾಜಿ ಶಾಸಕರಾದ ಸಂಜಯ್ ಪಾಟೀಲ್ ಹಾಗೂ ಮುಖಂಡರಾದ ಎಂ.ಬಿ.ಜಿರಲಿ ಅವರು ಮಾತನಾಡಿ ರಾಜ್ಯ ಸರಕಾರವು ಬಜೆಟ್‌ನಲ್ಲಿ SC-ST ಸಮುದಾಯಗಳಿಗೆ ಮೀಸಲಿಟ್ಟ SCSP-TSP ಹಣವನ್ನು ಗ್ಯಾರಂಟಿ ಯೋಜನೆಗಳಿಗೆ
ಬಳಸುತ್ತಿರುವುದು ಅತ್ಯಂತ ಖಂಡನೀಯ ಕಳೆದ 3 ವರ್ಷಗಳಲ್ಲಿ ಸುಮಾರು ಸಾವಿರ ಕೋಟಿ ಹಣವನ್ನು ಬೇರೆ ಉದ್ದೇಶಕ್ಕೆ
ಬಳಸಲಾಗುತ್ತಿರುವುದರಿಂದ ಪರಿಶಿಷ್ಟ ಜಾತಿ- ಪಂಗಡಗಳ (SC-ST) ಸಮುದಾಯದ ಜನರಿಗೆ ತೀವ್ರ ಅನ್ಯಾಯವಾಗಿದೆ. ಮುಂದೆ ಈ
ಮೊತ್ತವನ್ನು ಅನ್ಯ ಉದ್ದೇಶಗಳಿಗೆ ಬಳಸಬಾರದು ಮತ್ತು ಈಗಾಗಲೇ ಬಳಸಿದ ಮೊತ್ತವನ್ನು ಮತ್ತೆ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೇ
ಬಳಸಬೇಕೆಂದು ಒತ್ತಾಯಿಸುತ್ತೇವೆ. ಈ ರೀತಿ ಮೀಸಲಿಟ್ಟ ಹಣವನ್ನು ಪರಿಶಿಷ್ಟ ಸಮುದಾಯದ ಕಲ್ಯಾಣಕ್ಕೆ ಮಾತ್ರ ನೀಡಬೇಕೆಂದು ಜಿಲ್ಲಾ ಬಿಜೆಪಿ
ಒತ್ತಾಯಿಸುತ್ತದೆ.
ಇನ್ನು ಸಾಮಾನ್ಯ ಜನರ ಬದುಕಿಗೆ ಬರ ಎಳೆಯುತ್ತಿರುವ ಕಾಂಗ್ರೆಸ್ ಸರಕಾರ, ರೈತರು ತಮ್ಮ ಜಮೀನಿಗೆ ಟ್ರಾನ್ಸ್‌ಫಾರ್ಮರ್
ಆವಡಿಸಿಕೊಳ್ಳುವ ವೆಚ್ಚವನ್ನು 2 ಲಕ್ಷಕ್ಕೆ ಏರಿಸಿದೆ. ಹಾಲಿನ ದರ ಏರಿಕೆ, ವಿದ್ಯುತ್ ದರ ಏರಿಕೆ, ಬಸ್ ಪ್ರಯಾಣ ದರ ಏರಿಕೆ, ಸ್ಟಾಂಪ್ ಶುಲ್ಕ
ಏರಿಕೆ, ಮದ್ಯದ ದರ ಏರಿಕೆಯನ್ನು ಮಾಡಿದೆ. ದಿನೇದಿನೇ ಹೊಸ ಹೊಸ ತೆರಿಗೆಗಳನ್ನು ವಿಧಿಸಲಾಗುತ್ತಿದೆ. ಇದೆಲ್ಲದರ ಪರಿಣಾಮವಾಗಿ ಜನರ
ಬದುಕು ದುರ್ಭರವಾಗಿದೆ, ಕೂಡಲೇ ಸರಕಾರವು ಬೆಲೆ ಏರಿಕೆಯನ್ನು ಇಳಿಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ
ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ,ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡರ, ಡಾ.ವಿಶ್ವನಾಥ್ ಪಾಟೀಲ್, ಅರವಿಂದ ಪಾಟೀಲ, ರಾಷ್ಟ್ರೀಯ ಓ.ಬಿ.ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ ಹಾಗೂ ಪ್ರಮುಖ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಪ್ರತೀಕ ಚಿಟಗಿ