ಬೆಂಗಳೂರು: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಅವರು ಆಕ್ಟೋಬರ್ 20 ಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವುದಕ್ಕೆ ಮುಹೂರ್ತ ಫಿಕ್ಸ್ ಆಗಿದೆ.
ಮಾಜಿ ಶಾಸಕಿ ಪೂರ್ಣಿಮಾ ಅವರು ಇಂದು ಸಂಜೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಚರ್ಚೆ ನಡೆಸಿದರು.
ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.