Ad imageAd image

ಕೆಎಲ್‌ಇ‌‌ ವಿಶ್ವವಿದ್ಯಾಲಯದ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Bharath Vaibhav
WhatsApp Group Join Now
Telegram Group Join Now

ಬೆಳಗಾವಿ: ಬೆಳಗಾವಿ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಕೊಡುಗೆ ಅಪಾರ. ಕಾಂಗ್ರೆಸ್ ಸರ್ಕಾರ ಅಂದು ಕೇವಲ ಒಂದು ರೂಪಾಯಿಗೆ ಜಮೀನು ನೀಡಿದ ಫಲವಾಗಿ, ಇಂದು ಕೆಎಲ್ಇ ದೊಡ್ಡ ಆಸ್ಪತ್ರೆ ಹಾಗೂ ವಿಶ್ವವಿದ್ಯಾಲಯವಾಗಿ‌ ಬೆಳೆದಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಕಾರಣ, ಬೆಳಗಾವಿ ಅಭಿವೃದ್ಧಿಯಲ್ಲಿ ಬಿಜೆಪಿ ಕೊಡುಗೆ ಏನು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನಿಸಿದರು.

ಕೆಎಲ್ಇ ವಿಶ್ವವಿದ್ಯಾಲಯದ ಜವಾಹರಲಾಲ್ ನೆಹರು ಮೆಡಿಕಲ್ ಕಾಲೇಜಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಪರ ಮತಯಾಚಿಸಿ ಮಾತನಾಡಿದ ಸಚಿವರು, ಬೆಳಗಾವಿ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಏನು? ಜಗದೀಶ್ ಶೆಟ್ಟರ್ ಕೊಡುಗೆ ಏನು? ಎಂದು ಜನ ತೀರ್ಮಾನಿಸುವರು ಎಂದರು.

ಸಾಮಾಜಿಕ ಜವಾಬ್ದಾರಿ ಅರಿತು ಪ್ರತಿಯೊಬ್ಬರೂ ಮತದಾನ ಮಾಡಬೇಕು. ಹುಬ್ಬಳ್ಳಿ ಜನರಿಂದ‌ ತಿರಸ್ಕಾರಕ್ಕೆ ಒಳಗಾಗಿರುವ ವ್ಯಕ್ತಿಯನ್ನು ಬೆಳಗಾವಿಯಲ್ಲಿ ಗೆಲ್ಲಿಸುವುದು ಸರಿಯಲ್ಲ. ಮೃಣಾಲ್‌ ಇನ್ನೂ ಯುವಕ ಬೆಳಗಾವಿ ಅಭಿವೃದ್ಧಿಗೆ ತನ್ನದೇ ಕನಸು ಕಟ್ಟಿಕೊಂಡಿದ್ದಾನೆ ಎಂದು ಹೇಳಿದರು.

ಎರಡು ಬಾರಿ‌ ಸಚಿವರಾಗಿ, ಮುಖ್ಯಮಂತ್ರಿಯಾಗಿ, ರಾಜಕೀಯದಲ್ಲಿ ಸಾಕಷ್ಟು ಅನುಭವ ಹೊಂದಿರುವ ಜಗದೀಶ್ ಶೆಟ್ಟರ್ ಅವರಿಗೆ ಸ್ವಂತ ಶಕ್ತಿ ಎಂಬುದೇ‌ ಇಲ್ಲ. ಪ್ರಚಾರಕ್ಕೆ ಹೋದಲೆಲ್ಲಾ ನರೇಂದ್ರ ಮೋದಿ ಅವರನ್ನು ಪ್ರಧಾನ ಮಂತ್ರಿ ಮಾಡುವ ಸಲುವಾಗಿ ಮತ ನೀಡಬೇಕು ಅಂತ ಹೇಳ್ತಿದ್ದಾರೆ. ಸ್ವಂತ ಶಕ್ತಿಯೇ ಇಲ್ಲದ ಶೆಟ್ಟರ್ ಅವರಿಂದ ಬೆಳಗಾವಿ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನಿಸಿದರು.

ರಾಜಕಾರಣವನ್ನು ಎಂದಿಗೂ ಟೈಮ್ ಪಾಸ್ ಆಗಿ ನೋಡಿಲ್ಲ. ಜನಸೇವೆಯೇ ನನಗೆ ವೃತ್ತಿ ಇದ್ದಂತೆ‌. ರಾಜಕಾರಣದಲ್ಲಿ ನನ್ನಷ್ಟು ಅವಮಾನ ಎದುರಿಸಿದವರು ಇಲ್ಲ. ಎಲ್ಲವನ್ನೂ ಮೆಟ್ಟಿ ನಿಂತು ಬಂದಿದ್ದೇನೆ. ನಾನು ಯಾವತ್ತೂ ಜಾತಿ‌ ರಾಜಕೀಯ ಮಾಡಿಲ್ಲ. ಅಭಿವೃದ್ಧಿಯೇ ನನ್ನ ಮೂಲ ಮಂತ್ರ ಎಂದು ಹೇಳಿದರು.

ಈ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೋ.ರಾಜೀವ್ ಗೌಡ, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಮಾತನಾಡಿದರು.

ಈ ವೇಳೆ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ, ಕೆಎಲ್ ಇ ವಿಶ್ವವಿದ್ಯಾಲಯದ ಆಜೀವ ಸದಸ್ಯರಾದ ಡಾ.ವಿ.ಎಸ್. ಸಾಧುನವರ್ ಉಪಸ್ಥಿತರಿದ್ದರು.

 

ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!