ನವದೆಹಲಿ: ಕೇಂದ್ರ ಸರ್ಕಾರ ಮನ್ರೇಗಾ(ನರೇಗಾ) ಯೋಜನೆ ಹೆಸರು ಬದಲಾವಣೆ ಮಾಡಲು ಮತ್ತು ಸ್ವರೂಪ ಬದಲಾವಣೆ ಮಾಡಲು ಮುಂದಾಗಿರುವುದನ್ನು ವಿರೋಧಿಸಿ ಇಂದು ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಕೈಗೊಂಡಿದೆ.
ದೇಶಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಕೈಗೊಂಡಿದ್ದಾರೆ.ಕೇಂದ್ರ ಸರ್ಕಾರದ ನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ಬೆಳಗಾವಿಯಲ್ಲಿ ಕೂಡ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಇಂದು ಬೆಳಗಾವಿಯಲ್ಲಿ ಸಚಿವರು, ಕಾಂಗ್ರೆಸ್ ಶಾಸಕರು ಪ್ರತಿಭಟನೆ ನಡೆಸಲಿದ್ದಾರೆ. ಸುವರ್ಣ ಸೌಧದ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಲಾಗುವುದು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಸದನದ ಒಳಗೂ ಈ ಬಗ್ಗೆ ಚರ್ಚೆ ನಡೆಸಲು ಕಾಂಗ್ರೆಸ್ ತೀರ್ಮಾನ ಕೈಗೊಂಡಿದೆ.




