Join The Telegram | Join The WhatsApp |
ಧಾರವಾಡ: ಬೆಳೆ ಹಾನಿ ಪರಿಹಾರ ಕೂಡಲೇ ಬಿಡುಗಡೆ ಮಾಡಿ ಎಂದು ಕಾಂಗ್ರೆಸ್ ಬ್ರಹತ್ ಪ್ರತಿಭಟನೆ.
ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ರೈತರು ಬೆಳೆದ ಬೆಳೆ ಸಂಪೂರ್ಣ ನಷ್ಟವಾಗಿ ಹೋಗಿದೆ, ಹಾಗೂ ಗ್ರಾಮೀಣ ಭಾಗದಲ್ಲಿ ಹೆಚ್ಚು ಮಳೆಯಿಂದ ಮನೆಗಳೆಲ್ಲ ಕುಸಿದು ಅಪಾರ ಹಾನಿಯಾಗಿ ಹೋಗಿದೆ,ಆದ ಕಾರಣ ಕೂಡಲೇ ಪರಿಹಾರ ನೀಡಬೇಕೆಂದು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಇಂದು ಧಾರವಾಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬ್ರಹತ್ ಪ್ರತಿಭಟನೆ ಮಾಡಿದರು.
ಪ್ರತಿಭಟನಾ ಮೆರವಣಿಗೆ ಮೂಲಕ ಬಂದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.
ಅತಿಯಾದ ಮಳೆಯಿಂದಾಗಿ ಗ್ರಾಮೀಣ ಪ್ರದೇಶದ ರೈತರಿಗೆ, ಹಾಗೂ ಮನೆಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದೆ,ಅವರ ಸಂಕಷ್ಟಕ್ಕೆ ಬಾರದೆ, ಬಿ ಜೆ ಪಿ ಸರ್ಕಾರ ಸುಮ್ಮನೆ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ರಾಜ್ಯ ಸರ್ಕಾರ ರೈತರ ಸಂಕಷ್ಟಕ್ಕೆ ಬಾರದೆ ಹೋದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡಲಾಗುವದು ಎಂದು ಎಚ್ಚರಿಸಿದರು.
ಸಂಧರ್ಭದಲ್ಲಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಈಶ್ವರ ಶಿವಳ್ಳಿ, ಪ್ರಶಾಂತ ಕೆಕರೇ,ದೀಪಾ ನೀರಲಕಟ್ಟಿ, ರಾಜು ಕಮತಿ,ನವೀನ ಕದಂ ಮತ್ತು ಹಾಲಿ ಮಹಾನಗರ ಪಾಲಿಕೆಯ ಸದಸ್ಯರು,ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು .
ವರದಿ:ವಿನಾಯಕ ಗುಡ್ಡದಕೇರಿ
Join The Telegram | Join The WhatsApp |