Ad imageAd image

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ : ಕಾಂಗ್ರೆಸ್ ಅಧಿಕೃತ ಪ್ರಕಟಣೆ

Bharath Vaibhav
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ : ಕಾಂಗ್ರೆಸ್ ಅಧಿಕೃತ ಪ್ರಕಟಣೆ
CONGRESS
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಕಾಂಗ್ರೆಸ್ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ.

ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಗ್ಯಾರಂಟಿ ಯೋಜನೆಗಳು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಜೀವನಾಧಾರವಾಗಿವೆ. 4.40 ಕೋಟಿ ಜನರಿಗೆ ಈ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನ ಸಿಗುತ್ತಿದೆ. ಹೀಗಿದ್ದರೂ ಅನಾವಶ್ಯಕವಾಗಿ ಕೆಲವು ಸಚಿವರು ಮಾತನಾಡುತ್ತಿರುವುದು ಸರಿಯಲ್ಲ. ಅದೇನೇ ಇದ್ದರೂ ಮುಖ್ಯಮಂತ್ರಿಗಳು ಮತ್ತು ಪಕ್ಷದ ಅಧ್ಯಕ್ಷರ ಜೊತೆ ಚರ್ಚಿಸಿ ಹೇಳಿಕೆ ನೀಡಬೇಕು ಎಂದು ಎಂದು ಕಾಂಗ್ರೆಸ್ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!