ಕಲಬುರಗಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಭೀಮವಾದ ಜಿಲ್ಲಾ ಸಮಿತಿ ಕಲಬುರಗಿ ವತಿಯಿಂದ ಸಂವಿಧಾನ ಅರಿವು ಹಾಗೂ ಪ್ರಜಾಪ್ರಭುತ್ವದ ಸಂರಕ್ಷಣೆಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 26 ನವೆಂಬರ್ 2025, ಬುಧವಾರ ಮದ್ಯಾಹ್ನ 11:30 ಗಂಟೆಗೆ, ಕಲಬುರಗಿ ಸೂಪರ್ ಮಾರ್ಕೆಟ್, ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿದೆ.
ಸಂವಿಧಾನ ದಿನದ ಆಚರಣೆಯ ಅಂಗವಾಗಿ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಹಾಗೂ ತಾಲೂಕು ಸಮಿತಿ ಪದಾಧಿಕಾರಿಗಳು ಭಾಗವಹಿಸಲಿದ್ದು,
“ಸಂವಿಧಾನವು ಕೇವಲ ಪುಸ್ತಕದಲ್ಲಿನ ಪದಗಳಲ್ಲ; ಅದು ನಮ್ಮ ಪ್ರಜಾಪ್ರಭುತ್ವದ ಶಕ್ತಿ ಮತ್ತು ಜನರ ಹಕ್ಕುಗಳ ಭದ್ರ ಬುನಾದಿ. ಈ ಮಹತ್ವದ ಜಾಗೃತಿ ಕಾರ್ಯಕ್ರಮಕ್ಕೆ ದಲಿತ ಸಂಘರ್ಷ ಸಮಿತಿಯ, ಜಿಲ್ಲೆಯ ವಿವಿಧ ತಾಲೂಕು ಮತ್ತು ಗ್ರಾಮ ಶಾಖೆಗಳ ಕಾರ್ಯಕರ್ತರು, ಸಮಾಜ ಸೇವಕರು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ರವರ ಅಭಿಮಾನಿಗಳು ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಸಂಚಾಲಕರಾದ ಕಾಶೀನಾಥ್ ಶೇಳ್ಳಗಿ ಕರೆ ನೀಡಿದರು.




