ಮಾನ್ವಿಯಲ್ಲಿ ಸಂವಿಧಾನ ಉತ್ಸವ ಸಮಾರಂಭ
ಟಿಎಪಿಸಿಎಂಎಸ್ ಆವರಣದಲ್ಲಿ ಕಾಯಕ್ರಮ
ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ
ತಾಲೂಕಿನ ವಿವಿಧ ಪಕ್ಷಗಳ ಮುಖಂಡರು ಭಾಗಿ
ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗಿ
ನವೆಂಬರ್ 26ರಂದು ಭಾರತೀಯ ನಾಗರೀಕರಿಗೆ ವಿಶೇಷ ದಿನವಾದ ಹಿನ್ನೆಲೆಯಲ್ಲಿ, ಮಾನ್ವಿ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಲೋಯೋಲಾ ಶಿಲ್ಷಣ ಸಂಸ್ಥೆಯ ಸಹಯೋಗದಲ್ಲಿ ಸಂವಿಧಾನ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಕೀಲ ಯಲ್ಲಪ್ಪ ಬಾದರದಿನ್ನಿ ತಿಳಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲ ಅಂಬೇಡ್ಕರ್ ಬರೆದ ಸಂವಿಧಾನವನ್ನು ಸಾರ್ವಜನಿಕರಿಗೆ ಅರಿವು ಮೂಡಿಸುವುದೆ ನಮ್ಮ ಗುರಿ ಎಂದರು.
ಕಾರ್ಯಕ್ರಮದಲ್ಲಿ ದಾವಣಗೆರೆಯ ಬಹುಜನ ಚಿಂತಕರಾದ ವಿಜಯಬಾಬು ಪಾಟೇಲ್ ಸೇರಿದಂತೆ ರಾಜಕೀಯ ಗಣ್ಯರು ಹಾಗು ಶಾಲಾ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು.
ಜಗತ್ತಿನ ಅತಿದೊಡ್ಡ ಲಿಖಿತ ಸಂವಿಧಾನವನ್ನು ನಮ್ಮ ಸಂಸತ್ತಿನಲ್ಲಿ ಅಂಗೀಕರಿಸಿದ ದಿನವಾದ ಹಿನ್ನೆಲೆಯಲ್ಲಿ ನಾವೆಲ್ಲರೂ ವಿಶೇಷವಾಗಿ ಸಂವಿಧಾನ ಸಮರ್ಪಣಾ ದಿನವನ್ನು ಸಂಭ್ರಮದಿಂದ ಆಚರಿಸೋಣ ಎಂದರು.
ವರದಿ : ಶಿವ ತೇಜ