Ad imageAd image

ರಾಜ್ಯದಲ್ಲಿ “ಹಮಾರ ಬಾರಾಹ್” ಎಂಬ ವಿವಾದಾತ್ಮಕ ಸಿನಿಮಾ ನಿಷೇಧ 

Bharath Vaibhav
ರಾಜ್ಯದಲ್ಲಿ “ಹಮಾರ ಬಾರಾಹ್” ಎಂಬ ವಿವಾದಾತ್ಮಕ ಸಿನಿಮಾ ನಿಷೇಧ 
WhatsApp Group Join Now
Telegram Group Join Now

ಬೆಂಗಳೂರು: ದಿನಾಂಕ: 07-06-2024 ರಂದು ಬಿಡುಗಡೆಯಾಗಲಿರುವ “ಹಮಾರ ಬಾರಾಹ್” ಎಂಬ ವಿವಾದಾತ್ಮಕ ಸಿನಿಮಾವನ್ನು ಬಿಡುಗಡೆ ಮಾಡುವುದನ್ನು ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ.

ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ, ರಾಜ್ಯದ ವಿವಿಧ ಜಿಲ್ಲೆ / ತಾಲ್ಲೂಕುಗಳ ಮುಸ್ಲಿಂ ಸಂಘಗಳಿಂದ ಸ್ವೀಕೃತವಾಗಿರುವ ಮನವಿಗಳಲ್ಲಿ ಜೀ ಸಿನಿಮಾ ವಾಹಿನಿಯು ಇತ್ತೀಚಿಗೆ “ಹಮಾರ ಬಾರಾಹ್” ಎಂಬ ಚಲನಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದು, ಇದರಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪುಚೋದನಾತ್ಮಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ.

ಆದ್ದರಿಂದ ಇಂತಹ ಚಿತ್ರಗಳಿಗೆ ಅನುಮತಿ ನೀಡಿದರೆ ಧರ್ಮ ಮತ್ತು ಜಾತಿಗಳ ಮಧ್ಯೆ ದ್ವೇಷ ಹುಟ್ಟಿಸುತ್ತದೆ. ದೇಶದಲ್ಲಿ ಒಂದು ಧರ್ಮವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ, ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ದೇಶದಲ್ಲಿ ಅಶಾಂತಿ ಉಂಟು ಮಾಡುವುದು, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು ಒಂದು ಷಡ್ಯಂತ್ರವಾಗಿದೆ.

ಚಲನಚಿತ್ರಗಳು ಸಮಾಜದಲ್ಲಿ ಮಾರ್ಗದರ್ಶನವಾಗಬೇಕು, ಅದನ್ನು ಬಿಟ್ಟು ಧರ್ಮಗಳ ಮಧ್ಯೆ ದ್ವೇಷ ಭಾವನೆ ಹುಟ್ಟಿಸುವುದಲ್ಲ. ಅದರಂತೆ, ಜೂನ್ 07, 2024 ರಂದು ದೇಶಾದ್ಯಂತ ಬಿಡುಗಡೆಯಾಗಲಿರುವ “ಹಮಾರೆ ಬಾರಾಹ್” ಎಂಬ ವಿವಾದಾತ್ಮಕ ಸಿನಿಮಾವನ್ನು ಬಿಡುಗಡೆ ಮಾಡದೇ ಇರಲು ಕೋರಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!