Ad imageAd image

ಕಾಂಗ್ರೆಸ್ ಸರ್ಕಾರಕ್ಕೆ ನಿಗಮ ಮಂಡಳಿಗಳೇ ATM ಗಳು : ಆರ್ ಅಶೋಕ್ ವಾಗ್ಧಾಳಿ 

Bharath Vaibhav
ಕಾಂಗ್ರೆಸ್ ಸರ್ಕಾರಕ್ಕೆ ನಿಗಮ ಮಂಡಳಿಗಳೇ ATM ಗಳು : ಆರ್ ಅಶೋಕ್ ವಾಗ್ಧಾಳಿ 
R ASHOK
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ನಿಗಮ ಮಂಡಳಿಗಳೇ ATM ಗಳು ಎಂಬುದಾಗಿ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕವನ್ನ ಲೂಟಿ ಮಾಡಿ ಕಾಂಗ್ರೆಸ್ ಹೈಕಮಾಂಡ್ ಗೆ ಟಕಾಟಕ್ ಅಂತ ಹಣ ವರ್ಗಾವಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ನಿಗಮ ಮಂಡಳಿಗಳೇ ATMಗಳು ಅಂತ ಹೇಳಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ಗಮನಿಸಿದರೆ, ರಾಜ್ಯದಲ್ಲಿರುವ ಎಲ್ಲಾ ನಿಗಮ ಮಂಡಳಿಗಳನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡಿರುವ ದಟ್ಟವಾದ ಶಂಕೆ ಮೂಡುತ್ತಿದೆ ಎಂದಿದ್ದಾರೆ.

ದಲಿತರು, ಹಿಂದುಳಿದವರು, ಬಡವರು, ರೈತರು, ಗ್ರಾಮೀಣ ಪ್ರದೇಶಗಳ ಜನರ ಕಲ್ಯಾಣಕ್ಕೆ ವಿನಿಯೋಗವವಾಗಬೇಕಿದ್ದ ನಿಗಮ ಮಂಡಳಿಗಳ ಹಣ ಭ್ರಷ್ಟರ ಪಾಲಾಗುತ್ತಿರುವ ವಾಸನೆ ಬರುತ್ತಿದೆ ಎಂಬುದಾಗಿ ಗಂಭೀರ ಆರೋಪ ಮಾಡಿದ್ದಾರೆ.

ಕರ್ನಾಟಕದ ಜನತೆಯಲ್ಲಿ ಮೂಡಿರುವ ಈ ಅನುಮಾನ ನಿವಾರಿಸಲು, ರಾಜ್ಯದ ಎಲ್ಲಾ ನಿಗಮ ಮಂಡಳಿಗಳ ಹಣಕಾಸಿನ ಸ್ಥಿತಿಗತಿ ಬಗ್ಗೆ ಒಂದು ಸಂಪೂರ್ಣ ಆಡಿಟ್ ನಡೆಸಿ, ನಿಗಮ ಮಂಡಳಿಗಳ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಸಿಎಂ ಸಿದ್ಧರಾಮಯ್. ಅವರನ್ನು ಆಗ್ರಹಿಸಿದ್ದಾರೆ.

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!