ಬೆಂಗಳೂರು : ಆನ್ ಲೈನ್ ವ್ಯಾಪಾರದಲ್ಲಿ ನಷ್ಟವಾದ ಹಿನ್ನಲೆ ಮಕ್ಕಳನ್ನು ಕೊಂದು ದಂಪತಿಗಳು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸದಾಶಿವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ತಂದೆ ಅನೂಪ್, ತಾಯಿ ರಾಖಿ, ಹಾಗೂ ಮಕ್ಕಳಾದ ಅನುಪ್ರಿಯ, ಪ್ರಿಯಾನ್ಸು ಎಂದು ಗುರುತಿಸಲಾಗಿದೆ.ಮೃತರು ಮೂಲತಃ ಉತ್ತರ ಪ್ರದೇಶದವರಾಗಿದ್ದು, ಕಳೆದ ಕೆಲ ವರ್ಷಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದರು ಎನ್ನಲಾಗಿದೆ.
ಅನೂಪ್ ಜೀವನಕ್ಕಾಗಿ ಆನ್ ಲೈನ್ ನಲ್ಲಿ ವ್ಯಾಪಾರ ಮಾಡುತ್ತಿದ್ದ, ಆದರೆ ಇತ್ತೀಚೆಗೆ ಮಾರುಕಟ್ಟೆ ನಷ್ಟದಿಂದಾಗಿ ಆರ್ಥಿಕ ಸಮಸ್ಯೆ ಉಂಟಾಗಿದ್ದು, ಇದರಿಂದ ಮಕ್ಕಳನ್ನು ಕೊಂದು ಬಳಿಕ ದಂಪತಿಗಳು ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಸದ್ಯ ಈ ಘಟನೆಗೆ ಸಂಬಂಧಪಟ್ಟಂತೆ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.