Ad imageAd image

ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ : ಖುದ್ದು ಸಿಎಂ – ಡಿಸಿಎಂ ಹಾಜರಾಗಲು ಕೋರ್ಟ್ ಸೂಚನೆ

Bharath Vaibhav
ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ : ಖುದ್ದು ಸಿಎಂ – ಡಿಸಿಎಂ ಹಾಜರಾಗಲು ಕೋರ್ಟ್ ಸೂಚನೆ
siddaramaiah
WhatsApp Group Join Now
Telegram Group Join Now

ಬೆಂಗಳೂರು: ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಲ್ಲಿ ಬಿಜೆಪಿ ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಜೂನ್ 1ರಂದು ಖುದ್ದು ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿದೆ.

ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್. ಕೇಶವಪ್ರಸಾದ್ ಸಲ್ಲಿಸಿದ ಖಾಸಗಿ ದೂರಿನ ಬಗ್ಗೆ ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದ ಜೆ. ಪ್ರೀತ್ ವಿಚಾರಣೆ ನಡೆಸಿದ್ದಾರೆ.

ಆರೋಪಿತರ ಪರ ವಕೀಲರು ಚುನಾವಣೆ ನಿಮಿತ್ತ ನಮ್ಮ ಅರ್ಜಿದಾರರು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಮತ್ತಷ್ಟು ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ. ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಜೂನ್ 1ರಂದು ಹಾಜರಾಗುವಂತೆ ಆದೇಶಿಸಿ ವಿಚಾರಣೆ ಮುಂದೂಡಿದ್ದಾರೆ.

ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಕೂಡ ಆರೋಪಿತರಾಗಿದ್ದು, ಜೂನ್ 1ರಂದು ಹಾಜರಾಗಲು ಸಮನ್ಸ್ ಜಾರಿಗೊಳಿಸಲಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಷ್ಟ್ರೀಯ ಮತ್ತು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ 2023ರ ಮೇ 5ರಂದು ಕೆಪಿಸಿಸಿ ಜಾಹೀರಾತು ನೀಡಿ ಆಡಳಿತಾರೂಢ ಬಿಜೆಪಿ ಸರ್ಕಾರ ಶೇಕಡ 40ರಷ್ಟು ಕಮಿಷನ್ ಸರ್ಕಾರ. ಇದು ಕಳೆದ ನಾಲ್ಕು ವರ್ಷಗಳಲ್ಲಿ 1.50 ಲಕ್ಷ ಕೋಟಿ ರೂ. ಲೂಟಿ ಹೊಡೆದ ಭ್ರಷ್ಟ ಸರ್ಕಾರ ಎಂದು ಆರೋಪಿಸಿತ್ತು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!