ಬಾಗಲಕೋಟೆ: ‘ಬಾಗಲಕೋಟೆ ಬಸ್ ಸ್ಟ್ಯಾಂಡ್‌ನಾಗ’ ಹಾಡಿನ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ಸ್ಟಾರ್ ಆಗಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಜಾಮಿನು ಅರ್ಜಿ ತಿರಸ್ಕೃತಗೊಂಡಿದೆ.
15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮೈಲಾರಿಯ ಜಾಮೀನು ಅರ್ಜಿಯನ್ನು ವಜಾ ಮಾಡಿ ಬಾಗಲಕೋಟೆ ಜಿಲ್ಲಾ ನ್ಯಾಯಾಲಯ ನ್ಯಾಯಾಧೀಶೆ ಪ್ರೀತಿ ಸಗರ ಜೋಷಿ ಆದೇಶ ಹೊರಡಿಸಿದ್ದಾರೆ. ಇದರಿಂದ ಮೈಲಾರಿಗೆ ಜೈಲೇ ಗತಿಯಾಗಿದೆ.
ಆರ್ಕೆಸ್ಟ್ರಾ ಕಾರ್ಯಕ್ರಮದ ನಂತರ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ತಲೆಮರಿಸಿಕೊಂಡಿದ್ದ ಮೈಲಾರಿ ಇಂದು (ಡಿಸೆಂಬರ್ 17) ಮಹಾರಾಷ್ಟ್ರಕ್ಕೆ ತೆರಳುತ್ತಿರುವಾಗ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು.
ಇದೀಗ ಜಾಮೀನು ಕೋರಿ ಮೈಲಾರಿ, ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ಪೋಕ್ಸೊ ಫಾಸ್ಟ್ ಟ್ರ್ಯಾಕ್ ಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ಜನವರಿ 5ರಂದು ವಿಚಾರಣೆ ನಡೆಸಿ ಇಂದಿಗೆ ಆದೇಶ ಕಾಯ್ದಿರಿಸಿತ್ತು. ಇನ್ನೊಂದೆಡೆ ಜೈಲಿನಲ್ಲಿರುವ ಮೈಲಾರಿ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ. ಆದ್ರೆ, ಇದೀಗ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.




