Ad imageAd image

ಯಡಿಯೂರಪ್ಪ, ಬಿ. ಶ್ರೀರಾಮುಲು ವಿರುದ್ಧ ಕ್ರಿಮಿನಲ್ ಕೇಸ್ 

Bharath Vaibhav
ಯಡಿಯೂರಪ್ಪ, ಬಿ. ಶ್ರೀರಾಮುಲು ವಿರುದ್ಧ ಕ್ರಿಮಿನಲ್ ಕೇಸ್ 
WhatsApp Group Join Now
Telegram Group Join Now

ಬೆಂಗಳೂರು : ಕೊರೊನಾ ಅವಧಿಯಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮಲು ಪಿಪಿಇ ಕಿಟ್ ಗಳ ಖರೀದಿಯಲ್ಲಿ 14.21 ಕೋಟಿ ರೂ. ಭ್ರಷ್ಟಾಚಾರ ಎಸಗಿರುವುದರಿಂದ ಅವರ ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್ ನಡೆಸು ವಂತೆನ್ಯಾ. ಮೈಕಲ್ ಕುನ್ಹಾ ಆಯೋಗ ಶಿಫಾರಸು ಮಾಡಿದ್ದು, ರಾಜ್ಯ ಸರ್ಕಾರವು ಪ್ರಾಸಿಕ್ಯೂಷನ್ ಗೆ ಅಗತ್ಯ ಸಿದ್ಧತೆ ಆರಂಭಿಸಿದೆ.

ಏಪ್ರಿಲ್‌ 2020ರಲ್ಲಿ ಚೀನಾದ ಎರಡು ಕಂಪನಿಗಳಿಂದ 3 ಲಕ್ಷ ಪಿಪಿಇ ಕಿಟ್‌ಗಳನ್ನು ಅತ್ಯಂತ ದುಬಾರಿ ದರಗಳಲ್ಲಿ ಖರೀದಿಸಿದ್ದಕ್ಕೆ ಯಾವುದೇ ನಿಖರವಾದ ಕಾರಣವಿಲ್ಲ ಎಂಬುದು ‘ದಿ ಹಿಂದೂ’ಗೆ ಲಭ್ಯವಿರುವ ಡಿ ಕುನ್ಹಾ ಅವರ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪಿಪಿಇ ಕಿಟ್‌ ಖರೀದಿ ಪ್ರಕ್ರಿಯೆ ಸಂದರ್ಭ ಬಿ. ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು ಮತ್ತು ಬಿ. ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದರು. 1988ರ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ವಿಶ್ವಾಸಾರ್ಹತೆ ಉಲ್ಲಂಘನೆ ಅಪರಾಧದ ಅನ್ವಯ ಸೆಕ್ಷನ್‌ 7 ಮತ್ತು 11ರ ಅಡಿ ತನಿಖೆ ನಡೆಸುವಂತೆ ಆಯೋಗವು ಶಿಫಾರಸು ಮಾಡಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳಿದೆ.

ಆಗಸ್ಟ್‌ 31ರಂದು ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು. ಪ್ರಸ್ತುತ ಸಂಪುಟದ ಉಪ ಸಮಿತಿಯು ವರದಿಯನ್ನು ಪರಿಶೀಲಿಸುತ್ತಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!