ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಅಸಂವಿಧಾನಿಕ ಪದ ಬಳಕೆ ಆರೋಪ ಬೆನ್ನಲ್ಲೇ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ.ರವಿ ಬೆಳಗಾವಿ ಭೇಟಿ ಮಹತ್ವ ಪಡೆದುಕೊಂಡಿದೆ. ಸಿಟಿ ರವಿ ಬೆಳಗಾವಿ ಪ್ರವಾಸ ಕೈಗೊಂಡಿದ್ದು, ಟೆಂಪಲ್ ರನ್ ನಡೆಸಿದ್ದಾರೆ.
ನಗರದ ಕಪಿಲೇಶ್ವರ ದೇವಸ್ಥಾನದಲ್ಲಿ ಸಿ.ಟಿ.ರವಿ ದಂಪತಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ರವಿ ದಂಪತಿಗಳ ಹೆಸರಿನಲ್ಲಿ ಕಪಿಲೇಶ್ವರ ದೇವಸ್ಥಾನದಲ್ಲಿ ಸಂಕಲ್ಪ ಸೇವೆ ನಡೆದಿದೆ. ಸಿ.ಟಿ.ರವಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ್, ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.
ರಾಜಕೀಯವಾಗಿ ಬಿಜೆಪಿ ಕಾಂಗ್ರೆಸ್ ಮಧ್ಯೆ ಸಂಘರ್ಷಕ್ಕೆ ಕಾರಣವಾಗಿತ್ತು. ಬೆಳಗಾವಿ ಸುವರ್ಣ ವಿಧಾನ ಸೌಧದ ಮುಂಭಾಗದಿಂದಲೇ ಅರೇಸ್ಟ್ ಮಾಡಿದ್ದ ಪೊಲೀಸರು, ಆ ಬಳಿಕ ರಾತ್ರಿಯಲ್ಲಾ ಬೆಳಗಾವಿ ಜಿಲ್ಲೆಯಾದ್ಯಂತ ಸುತ್ತಾಡಿಸಿದ್ದ ಪೊಲೀಸರು, ಬೆಳಗ್ಗೆ ಬೆಳಗಾವಿ ಕೋರ್ಟ್ ಮುಂದೆ ಹಾಜರು ಪಡಿಸಿದ್ದರು.
ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರು ಪಡಿಸಲು ಸೂಚನೆ ನೀಡಿದ್ದ ಹಿನ್ನೆಲೆ, ಬೆಳಗಾವವಿಗೆ ಕರೆದೊಯ್ಯಲಾಗುತ್ತಿತ್ತು.
ಈ ವೇಳೆ ದಾವಣಗೆರೆ ಹತ್ತಿರ ತಲುಪುತ್ತಿದ್ದಂತೆ ಕೋರ್ಟ್ ಆದೇಶದಂತೆ ಎಂಎಲಸಿ ಸಿ.ಟಿ.ರವಿಯನ್ನ ಬಿಡುಗಡೆ ಮಾಡಲಾಗಿತ್ತು. ಆ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಭೇಟಿ ನೀಡಿದ್ದಾರೆ.




