Join The Telegram | Join The WhatsApp |
ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ತುಕ್ಕುಗುಡ ಪ್ರದೇಶದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಇತರ ನಾಯಕರ ಹೋರ್ಡಿಂಗ್ ಗಳನ್ನು ಹಾಕಲಾಗಿದೆ.
ಸೆಪ್ಟೆಂಬರ್ 17ರಂದು ಪಕ್ಷದ ಸಮಾವೇಶದ ಹಿನ್ನೆಲೆಯಲ್ಲಿ ಈ ಹೋರ್ಡಿಂಗ್ ಗಳನ್ನು ಹಾಕಲಾಗಿದೆ. ಸೋನಿಯಾ ಗಾಂಧಿಯನ್ನು ಭಾರತ ಮಾತೆಯಂತೆ ಚಿತ್ರಿಸಲಾಗಿದ್ದು, ಭಾರಿ ವಿವಾದಕ್ಕೆ ಕಾರಣವಾಗಿದೆ. ಒಂದು ಕಟೌಟ್ನಲ್ಲಿ ಸೋನಿಯಾ ಗಾಂಧಿ ಅವರನ್ನು ಭಾರತ ಮಾತೆಯಂತೆ ಬಿಂಬಿಸಲಾಗಿದೆ.
ಹೈದರಾಬಾದ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮುಕ್ತಾಯಗೊಂಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Join The Telegram | Join The WhatsApp |