ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ ಕಾರ್ಯಕ್ರಮ ಆರಂಭವಾಗಿದೆ. ‘ಮನ್ ಕಿ ಬಾತ್’ನ 115ನೇ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಸೈಬರ್ ವಂಚನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಇಂದು ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ವಿಜಯಪುರದ ವ್ಯಕ್ತಿಗೆ ಸೈಬರ್ ವಂಚನೆ ನಡೆದಿರುವ ಕುರಿತು ಪ್ರಸ್ತಾಪ ಮಾಡಿದ್ದು, ವಿಜಯಪುರದ ವ್ಯಕ್ತಿಯೊಬ್ಬರಿಗೆ ಮುಂಬೈ ಪೊಲೀಸರು ಹೆಸರಿನಲ್ಲಿ ವಿಡಿಯೋ ಕಾಲ್ ಮಾಡಿದ ಸೈಬರ್ ವಂಚಕರು ವ್ಯಕ್ತಿಗೆ ವೆರಿಫಿಕೇಷನ್ ಹೆಸರಿನಲ್ಲಿ ಆಧಾರ್ ಕಾರ್ಡ್ ತೋರಿಸುವಂತೆ ಹೇಳಿ ವಂಚನೆ ಮಾಡಿದ್ದಾರೆ.ಇದರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ.
“ಕಾನೂನಲ್ಲಿ ಡಿಜಿಟಲ್ ಬಂಧನದಂತಹ ವ್ಯವಸ್ಥೆ ಇಲ್ಲ, ಇದು ಕೇವಲ ವಂಚನೆ, ವಂಚನೆ, ಸುಳ್ಳು, ಅಪರಾಧಿಗಳ ಗುಂಪು ಮತ್ತು ಇದನ್ನು ಮಾಡುತ್ತಿರುವವರು ಸಮಾಜದ ಶತ್ರುಗಳು. ವಿವಿಧ ತನಿಖಾ ಸಂಸ್ಥೆಗಳು ಡಿಜಿಟಲ್ ಬಂಧನದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಯನ್ನು ನಿಭಾಯಿಸಲು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಈ ಏಜೆನ್ಸಿಗಳ ನಡುವೆ ಸಮನ್ವಯವನ್ನು ಸೃಷ್ಟಿಸಲು ರಾಷ್ಟ್ರೀಯ ಸೈಬರ್ ಕೋ-ಆರ್ಡಿನೇಷನ್ ಸೆಂಟರ್ ಅನ್ನು ಸ್ಥಾಪಿಸಲಾಗಿದೆ.