ಬೆಳಗಾವಿ: ಸಿಲಿಂಡರ್ ಸ್ಫೋಟಗೊಂಡು ಇಡೀ ಬೇಕರಿಯೇ ಸುಟ್ಟು ಕರಕಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಘಟನೆ ನಡೆದಿದೆ.
ಹಾಸನ ಮೂಲದ ವಿರೂಪಾಕ್ಷ ಎಂಬುವವರಿಗೆ ಸೇರಿದ ಬೇಕರಿ ಇದಾಗಿದ್ದು, ಬೆಳಿಗ್ಗೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ.ಇಡೀ ಬೇಕರಿಗೆ ಬೆಂಕಿ ಹೊತ್ತಿಕೊಂಡಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸದ್ಯ ಬೇಕರಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




