Ad imageAd image

ಆರ್ ಎಸ್ ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿ ಡಿ. ಕೆ ಶಿವಕುಮಾರ್ 

Bharath Vaibhav
ಆರ್ ಎಸ್ ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿ ಡಿ. ಕೆ ಶಿವಕುಮಾರ್ 
DKS
WhatsApp Group Join Now
Telegram Group Join Now

ಬೆಂಗಳೂರು : ವಿಧಾನಸಭೆಯಲ್ಲಿ ಆರ್​ಎಸ್​ಎಸ್​ ಗೀತೆ ಹಾಡಿದ ವಿಚಾರವಾಗಿ ಕಾಂಗ್ರೆಸ್​​ನ ಅನೇಕ ನಾಯಕರು ಡಿಕೆ ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ಟೀಕೆ ಮಾಡಿದ್ದರು. ರೀ ವಿಚಾರವಾಗಿ ಇಂದು ಪತ್ರಿಕಾಗೋಷ್ಠಿ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್ ಆರ್ ಎಸ್ ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿದ್ದಾರೆ.

ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ. ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ. ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು. ವಿಧಾನಸಭೆಯಲ್ಲಿ ಆಚಾರ ವಿಚಾರಗಳನ್ನು ಪಾಲನೆ ಮಾಡಿಕೊಂಡು ಬಂದಿದ್ದೇನೆ. ವಿದ್ಯಾರ್ಥಿ ಸಂಘಟನೆಯಲ್ಲಿಂದಲೇ ಗುರುತಿಸಿಕೊಂಡು ಬಂದಿದ್ದೇನೆ.

ಹೊಸದಾಗಿ ಕಾಂಗ್ರೆಸ್ ಸೇರಿಲ್ಲ, ಯಾರ ಪಾಠವೂ ಅಗತ್ಯವಿಲ್ಲ. ನನಗೂ ಗಾಂಧಿ ಕುಟುಂಬಕ್ಕೂ ಭಕ್ತ ಭಗವಂತನ ನಡುವಿರುವ ಸಂಬಂಧ. ನಾನು ಎಂಎ ಪೊಲೀಟಿಕಲ್ ವಿದ್ಯಾರ್ಥಿ ಎಂದರು.

ರಾಜಕಾರಣಕ್ಕೆ ಬರೋದಕ್ಕಿಂತಲೂ ಮುನ್ನ ಎಲ್ಲಾ ಪಕ್ಷಗಳ ಅಧ್ಯಯನ ಮಾಡಿದ್ದೇನೆ. ಕಮ್ಯೂನಿಸಂ, ಬಿಜೆಪಿ, ಆರ್​​ಎಸ್​​ಎಸ್, ದಳ ಎಲ್ಲ ಪಕ್ಷಗಳ ಬಗ್ಗೆ ತಿಳಿದಿದ್ದೇನೆ. ಮುಸ್ಲಿಂ ಲೀಗ್ ಸಮಾವೇಶದಲ್ಲೂ ಭಾಗಿಯಾಗಿದ್ದೆ. ಅವರ ಶಿಸ್ತಿಗೆ ಬೆರೆಗಾಗಿದ್ದೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಅಲ್ಲದೆ, ಬೇಕಾದರೆ ಕ್ಷಮೆ ಕೇಳೋಣ. ಬಿಕೆ ಹರಿಪ್ರಸಾದ್​​ಗೂ ಕ್ಷಮೆ ಕೇಳೋಣ ಎಂದರು.

ನಾನು ಕಾಂಗ್ರಸ್ ಪಕ್ಷದಲ್ಲಿದ್ದೇನೆ ನಿಜ. ಹಾಗೆಂದು ನನ್ನ ಧರ್ಮ ನಾನು ಬಿಡಲ್ಲ. ನನ್ನ ಧರ್ಮದ ಜತೆಗೆ ಇತರ ಧರ್ಮಗಳ ಬಗ್ಗೆಯೂ ನನಗೆ ನಂಬಿಕೆ ಇದೆ. ಮುಸ್ಲಿಂ, ಕ್ರಿಶ್ಚಿಯನ್ ಇತರ ಧರ್ಮಗಳ ಬಗ್ಗೆಯೂ ಗೌರವ ಇದೆ. ಆದರೆ, ಇವೆಲ್ಲದಕ್ಕಿಂತಲೂ ಮಾನವ ಧರ್ಮದ ಮೇಲೆ ನಾನು ಹೆಚ್ಚು ನಂಬಿಕೆ ಇಟ್ಟಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!