ನವದೆಹಲಿ: 2013 ರಲ್ಲಿ ನಡೆದ ಸಾಮಾಜಿಕ ಕಾರ್ಯಕರ್ತ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಪುಣೆ ನ್ಯಾಯಾಲಯ ಇಂದು ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಇತರ ಮೂವರು ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಿಕ್ಕಿರಿದ ನ್ಯಾಯಾಲಯದಲ್ಲಿ ಆದೇಶವನ್ನು ಓದಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ವಿಶೇಷ ನ್ಯಾಯಾಲಯ) ಪಿ.ಪಿ.ಜಾಧವ್, ಸಚಿನ್ ಅಂಡೂರೆ ಮತ್ತು ಶರದ್ ಕಲಾಸ್ಕರ್ ವಿರುದ್ಧದ ಕೊಲೆ ಮತ್ತು ಪಿತೂರಿ ಆರೋಪಗಳನ್ನು ಪ್ರಾಸಿಕ್ಯೂಷನ್ ಸಾಬೀತುಪ ಡಿಸಿದೆ ಮತ್ತು ಅವರಿಗೆ ಜೀವಾವಧಿ ಶಿಕ್ಷೆ ಮತ್ತು 5 ಲಕ್ಷ ರೂ ವಿಧಿಸಲಾಗಿದೆ ಅಂತ ತಿಳಿಸಿದರು.
ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯವು ಆರೋಪಿಗಳಾದ ಇಎನ್ಟಿ ಸರ್ಜನ್ ತಾವ್ಡೆ, ಸಂಜೀವ್ ಪುನಲೇಕರ್ ಮತ್ತು ವಿಕ್ರಮ್ ಭಾವೆ ಅವರನ್ನು ಖುಲಾಸೆಗೊಳಿಸಿತು.