ನವದೆಹಲಿ : ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಅವರಿಗೆ 2023ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನ ನೀಡಲಾಗುತ್ತಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ಪ್ರಕಟಿಸಿದೆ.
“ಮೋಹನ್ ಲಾಲ್ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತದೆ!ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಲೆಜೆಂಡರಿ ನಟ, ನಿರ್ದೇಶಕ ಮತ್ತು ನಿರ್ಮಾಪಕರನ್ನು ಗೌರವಿಸಲಾಗುತ್ತಿದೆ” ಎಂದು ಸಚಿವಾಲಯ ಎಕ್ಸ್ ಪೋಸ್ಟ್’ನಲ್ಲಿ ತಿಳಿಸಿದೆ.
ಸೆಪ್ಟೆಂಬರ್ 23ರಂದು ನಡೆಯಲಿರುವ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.




