ಶಿವಮೊಗ್ಗ : ತೋಟದಲ್ಲಿ ಮೇಕೆ ಮೇಯಿಸುತ್ತಿದ್ದಕ್ಕೆ ಮಹಿಳೆಯೋರ್ವರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ನಡೆದಿದೆ.
ಕುರಿಗಳನ್ನು ತೋಟದಲ್ಲಿ ಮೇಯಿಸಿದ್ದಾಳೆ ಎಂದು ಕೋಪಗೊಂಡು ತೋಟದ ಮಾಲೀಕ ಹಾಗೂ ಆತನ ಮಗ ಅದೇ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ 50 ವರ್ಷದ ದಲಿತ ಮಹಿಳೆಯ ಸೀರೆ ಬಿಚ್ಚಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ.
ಸದ್ಯ ಸಂತ್ರಸ್ತೆಯನ್ನು ಸ್ಥಳೀಯರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ತೋಟದ ಮಾಲೀಕ ರಾಮನಹಳ್ಳಿ ಶಿವಕುಮಾರ್ ಎಂಬುವವರ ಮಗ ಅರುಣ್ ಎಂಬುವವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.




