Ad imageAd image

ದಲಿತ ಮಹಿಳೆಯ ಹತ್ಯೆ ಪ್ರಕರಣ : 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ 

Bharath Vaibhav
ದಲಿತ ಮಹಿಳೆಯ ಹತ್ಯೆ ಪ್ರಕರಣ : 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ 
WhatsApp Group Join Now
Telegram Group Join Now

ತುಮಕೂರು : ದಲಿತ ಮಹಿಳೆಯ ಬರ್ಬರ ಹತ್ಯೆ ಪ್ರಕರಣದಲ್ಲಿ 21 ಮಂದಿ ಅಪರಾಧಿಗಳು ಎಂದು ತುಮಕೂರಿನ ಜಿಲ್ಲಾ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಈಗಾಗಲೇ ತೀರ್ಪು ನೀಡಿದ್ದು, ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ.

ಮಹಿಳೆಯ ಕೊಲೆಗೈದಿದ್ದ 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ರೂ.13,500 ದಂಡ ಒಟ್ಟು 2 ಲಕ್ಷ 83 ಸಾವಿರ 500 ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ದಲಿತ ಸಮುದಾಯದ ಹೊನ್ನಮ್ಮ ಎಂಬವರ ಕೊಲೆ ನಡೆದಿತ್ತು. ಸುದೀರ್ಘ ಒಂದೂವರೆ ದಶಕಗಳ ಕಾಲ ಈ ಪ್ರಕರಣದ ತನಿಖೆ, ವಿಚಾರಣೆ ನಂತರ ಇದೀಗ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟಗೊಂಡಿದೆ.

ಏನಿದು ಪ್ರಕರಣ?

ತುಮಕೂರಿನ ಗೋಪಾಲಪುರದ ಡಾಬಾ ನಡೆಸುತ್ತಿದ್ದ ಹೊನ್ನಮ್ಮ ಎಂಬಾಕೆ ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡುಗಳನ್ನು ಸಂಗ್ರಹಿಸಿಟ್ಟಿದ್ದರು. ಅವುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರ ವಿರುದ್ಧ ಹೊನ್ನಮ್ಮ ಪೊಲೀಸ್ ಕಂಪ್ಲೇಂಟ್ ಕೊಟ್ಟಿದ್ದರು.

ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮ ನಡುವೆ ದ್ವೇಷ ಬೆಳೆದಿತ್ತು. ಹೀಗೆ ಶುರುವಾದ ದ್ವೇಷ ಹೊನ್ನಮ್ಮಳನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈಯುವುದರೊಂದಿಗೆ ಅಂತ್ಯಾವಗಿತ್ತು.

2010ರಲ್ಲಿ ನಡೆದ ಈ ಕೊಲೆ ಸಂಬಂಧ ಭಾರತೀಯ ದಂಡ ಸಂಹಿತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ಆರೋಪಿಗಳಾಗಿದ್ದ ರಂಗನಾಥ, ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ, ಮೀಸೆ ಹನುಮಂತಯ್ಯ, ಗಂಗಾಧರ (ಗಂಗಣ್ಣ), ನಂಜುಂಡಯ್ಯ (ಪರಿಶಿಷ್ಟ ಜಾತಿ), ಸತ್ಯಪ್ಪ-ಸತೀಶ (ಪರಿಶಿಷ್ಟ ಜಾತಿ), ಚಂದ್ರಶೇಖರ (ಚಂದ್ರಯ್ಯ), ರಂಗಯ್ಯ (ರಾಮಯ್ಯ), ಉಮೇಶ್, ಚನ್ನಮ್ಮ, ಮಂಜಣ್ಣ, ಮಂಜು, ಸ್ವಾಮಿ (ಮೋಹನ್ ಕುಮಾರ್) ಅವರನ್ನು ಅಪರಾಧಿಗಳೆಂದು ಘೋಷಿಸಿದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಪ್ರಕರಣದ ಇತರ 6 ಆರೋಪಿಗಳಾಗಿದ್ದ ಹನುಮಂತಯ್ಯ (ಪರಿಶಿಷ್ಟ ಜಾತಿ), ವೆಂಕಟೇಶ್,ರಾಮಯ್ಯ, ದಾಸಪ್ಪ, ಬುಳ್ಳೆ ಹನುಮಂತಯ್ಯ ಈಗಾಗಲೇ ಮೃತಪಟ್ಟಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!