ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಭಾರತೀಯ ಚುನಾವಣಾ ಆಯೋಗ ಮಹತ್ವದ ಆದೇಶ ಹೊರಡಿಸಿದೆ.
ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ನಾಮನಿರ್ದೇಶನಗಳಿಗೆ ಕೊನೆಯ ದಿನಾಂಕ-ಆಗಸ್ಟ್ 21, 2025, ಮತದಾನ ದಿನಾಂಕ (ಅಗತ್ಯವಿದ್ದರೆ)- ಸೆಪ್ಟೆಂಬರ್ 9, 2025.ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸಿದ್ದು, ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಮತದಾನ ನಡೆಯಲಿದೆ ಎಂದು ತಿಳಿಸಿದೆ.




