ದಾವಣಗೆರೆ : ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (95) ಇಂದು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಅವರು, ಕುಟುಂಬಸ್ಥರು, ಅಪಾರ ಬೆಂಬಲಿಗರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
ಇದೀಗ ದಾವಣಗೆರೆಯ ಕಲ್ಲೇಶ್ವರ ಮಿಲ್ ನಲ್ಲಿ ಸಕಲ ಸರ್ಕಾರಿ ಗೌರವ ಹಾಗು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪನವರ ಅಂತ್ಯಕ್ರಿಯೆ ನೆರವೇರಿತು.
ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ನಗರದ ಕಲ್ಲೇಶ್ವರ ಮಿಲ್ ನಲ್ಲಿ ಅಂತ್ಯ ಸಂಸ್ಕಾರ ನೆರವೇರಿತು. ಪತ್ನಿ ಸಮಾಧಿಯ ಪಕ್ಕದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ನೆರವೇರಿತು.
ವೀರಶೈವ ಲಿಂಗಾಯತ ವಿಧಿ ವಿಧಾನಗಳ ಪ್ರಕಾರ ಅಂತ್ಯಕ್ರಿಯೆ ನೆರವೇರಿತು ಪಂಚಪೀಠಾಧಿಶ್ವರರ ಪಾದೋಧಕ ಮೂಲಕ ಪೂಜೆ ಮಾಡಿ, ಕ್ರಿಯಾ ಸಮಾಧಿ ಬಳಿಕ ಶಿವಶಂಕರಪ್ಪ ಪಾರ್ಥಿವ ಶರೀರಕ್ಕೆ ಅಭಿಷೇಕ ಮಾಡಲಾಯಿತು. ಮಣ್ಣು ಹಾಕದೆ ಕ್ರಿಯಾ ಸಮಾಧಿಯಲ್ಲಿ ವಿಭೂತಿ ಹಾಕಲಾಯಿತು.
ಇದೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ನೂರಕ್ಕೂ ಹೆಚ್ಚು ವಿವಿಐಪಿಗಳು ಅಂತಿಮ ದರ್ಶನ ಪಡೆದರು. ಒಂದು ನೂರಕ್ಕೂ ಹೆಚ್ಚು ಪಂಚಪೀಠ ಮತ್ತು ವಿರಕ್ತಮಠಗಳ ಸ್ವಾಮೀಜಿಗಳು ಸಹ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.




