ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದಿಂದ ಅವಳಿ ನಗರಗಳ ನಡುವೆ ಪ್ರತಿ ದಿನ ಬೆಳಿಗ್ಗೆ ಹಾಗೂ ರಾತ್ರಿ ನಗರ ಸಾರಿಗೆ ಬಸ್‌ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬಿ.ಆರ್.ಟಿ.ಎಸ್. ಚಿಗರಿ ಬಸ್‌ಗಳ ಕಾರ್ಯಾಚರಣೆ ಆರಂಭವಾಗುವುದಕ್ಕಿಂತ ಮುನ್ನ ಮುಂಜಾನೆ 5.15, 5.30, 5.40ಕ್ಕೆ ಹಾಗೂ ಚಿಗರಿ ಬಸ್‌ಗಳ ಕಾರ್ಯಾಚರಣೆ ಸ್ಥಗಿತವಾದ ನಂತರ ರಾತ್ರಿ 11.15 ಮತ್ತು 11.30ಕ್ಕೆ ನಗರ ಸಾರಿಗೆ ಬಸ್‌ಗಳ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




