Ad imageAd image

ಡಿಸಿ ಭೂಬಾಲನ್ ಭೇಟಿ : ಕ್ರೀಡಾಂಗಣ ಸ್ಥಳ ಪರಿಶೀಲನೆ

Bharath Vaibhav
ಡಿಸಿ ಭೂಬಾಲನ್ ಭೇಟಿ : ಕ್ರೀಡಾಂಗಣ ಸ್ಥಳ ಪರಿಶೀಲನೆ
WhatsApp Group Join Now
Telegram Group Join Now

ಚಡಚಣ:-ಜಿಲ್ಲಾಧಿಕಾರಿ ಟಿ.ಭೂಬಾಲನ್ ಚಡಚಣ ಪಟ್ಟಣಕ್ಕೆ ಭೇಟಿ ನೀಡಿ ಶುಕ್ರವಾರ ಕ್ರೀಡಾಂಗಣಕ್ಕೆ ನಿಗದಿಪಡಿಸಿದ ಸ್ಥಳ ಪರಿಶೀಲನೆ ಮಾಡಿದರು.ಸ್ಥಳ ಪರಿಶೀಲನಾ ನಂತರ ನೂತನವಾಗಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ ಕಟ್ಟಡ ಕಾಮಗಾರಿ, ಸಾಮೂಹಿಕ ಶೌಚಾಲಯ, ಗ್ರಂಥಾಲಯ ಕಟ್ಟಡ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಶೀಘ್ರ ಕಾಮಗಾರಿಗಳು ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಅಧಿಕಾರಿ, ಸಿಬ್ಬಂದಿಗಳ ಸಭೆ ನಡೆಸಿ, ದೀರ್ಘಕಾಲ ವಿಲೇವಾರಿಗೊಳ್ಳದೇ ಬಾಕಿ ಇರುವ ಕಡತಗಳನ್ನು ಆದ್ಯತೆ. ಮೇರೆಗೆ ಪೂರ್ಣಗೊಳಿಸಲು ಸೂಚಿಸಿದ ಅವರು, , ಆಧಾರ ನೋಂದವು. `ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ;ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆಯ ಪ್ರಗತಿ ಮಾಹಿತಿ, ಜಾತಿ-ಆದಾಯ ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.

ಕಡತಗಳ ವಿಳಂಬಕ್ಕೆ ಅವಕಾಶ ಕೊಡದೆ ಶೀಘ್ರವಾಗಿ ವಿಲೇವಾರಿಗೆ ಕ್ರಮವಹಿಸುವಂತೆ ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ಚಡಚಣ ತಹಶೀಲ್ದಾರ ಎಸ್.ಬಿ ಇಂಗಳೆ, ಎಡಿಎಲ್‌ಆ‌ರ್ ರಾಜಶೇಖರ ಕಾಂಬ್ಳೆ, ಕಂದಾಯ ನೀರಿಕ್ಷಕರು ಪಿ. ಜೆ.ಕೊಡಹೊನ್ನ, ಗ್ರಾಮ ಆಡಳಿತ ಅಧಿಕಾರಿ ವಿಠ್ಠಲ ಕೋಳಿ ಹಾಗೂ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್ ಚಡಚಣ ಪಟ್ಟಣಕ್ಕೆ ಭೇಟಿ ನೀಡಿ ಶುಕ್ರವಾರ ಕ್ರೀಡಾಂಗಣಕ್ಕೆ ನಿಗದಿಪಡಿಸಿದ ಸ್ಥಳ ಪರಿಶೀಲನೆ ಮಾಡಿದರು.
ಸ್ಥಳ ಪರಿಶೀಲನಾ ನಂತರ ನೂತನವಾಗಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ ಕಟ್ಟಡ ಕಾಮಗಾರಿ, ಸಾಮೂಹಿಕ ಶೌಚಾಲಯ, ಗ್ರಂಥಾಲಯ ಕಟ್ಟಡ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಶೀಘ್ರ ಕಾಮಗಾರಿಗಳು ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಅಧಿಕಾರಿ, ಸಿಬ್ಬಂದಿಗಳ ಸಭೆ ನಡೆಸಿ, ದೀರ್ಘಕಾಲ ವಿಲೇವಾರಿಗೊಳ್ಳದೇ ಬಾಕಿ ಇರುವ ಕಡತಗಳನ್ನು ಆದ್ಯತೆ. ಮೇರೆಗೆ ಪೂರ್ಣಗೊಳಿಸಲು ಸೂಚಿಸಿದ ಅವರು, , ಆಧಾರ ನೋಂದವು. `ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ;ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆಯ ಪ್ರಗತಿ ಮಾಹಿತಿ, ಜಾತಿ-ಆದಾಯ ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.

ಕಡತಗಳ ವಿಳಂಬಕ್ಕೆ ಅವಕಾಶ ಕೊಡದೆ ಶೀಘ್ರವಾಗಿ ವಿಲೇವಾರಿಗೆ ಕ್ರಮವಹಿಸುವಂತೆ ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ಚಡಚಣ ತಹಶೀಲ್ದಾರ ಎಸ್.ಬಿ ಇಂಗಳೆ, ಎಡಿಎಲ್‌ಆ‌ರ್ ರಾಜಶೇಖರ ಕಾಂಬ್ಳೆ, ಕಂದಾಯ ನೀರಿಕ್ಷಕರು ಪಿ. ಜೆ.ಕೊಡಹೊನ್ನ, ಗ್ರಾಮ ಆಡಳಿತ ಅಧಿಕಾರಿ ವಿಠ್ಠಲ ಕೋಳಿ ಹಾಗೂ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ ಉಪಸ್ಥಿತರಿದ್ದರು.

ವರದಿ ಉಮಾಶಂಕರ ಕ್ಷತ್ರಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!