ಸೇಡಂ: ತಾಲೂಕಿನ ಅಡಕಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿನಾಂಕ ೦೯/೧೨)೨೦೨೫ರಂದು ಡಿಸಿ ಫೌಝಿಯಾ ತರುನ್ನುಮ್ ಬೇಟಿ ನೀಡಿ ರಾತ್ರಿಯ ಭೋಜನವನ್ನು ವಿದ್ಯಾರ್ಥಿಗಳೊಂದಿಗೆ ಮಾಡಿ ಊಟದ ಗುಣಮಟ್ಟ ಪರಿಶೀಲಿಸಿ ಉತ್ತಮ ಶಿಕ್ಷಣ ನೀಡುವಂತೆ ಶಿಕ್ಷಕರಿಗೆ ಸೂಚಿಸಿದರು.
ತದನಂತರ ಅರಿವಿನ ಮನೆ (ಗ್ರಂಥಾಲಯ) ಉದ್ಘಾಟನೆ ಮಾಡಿ ಮಾತನಾಡಿದರು.
ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ತರಲು ಪ್ರರಣೆ ನೀಡಿ ತದನಂತರ ಕರಾಟೆ ತರಬೇತಿ ಕಾರ್ಯಕ್ರಮ ವೀಕ್ಷಣೆ ಮಾಡಿ ಕೈತೋಟದ ಬಗ್ಗೆ ಹರ್ಷ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಎಸಿ ಪ್ರಭುರೆಡ್ಡಿ, ತಹಸೀಲ್ದಾರ್ ಶ್ರೇಯಾಂಕ ಧನುಶ್ರೀ ಸೇರಿದಂತೆ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




