ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಾರ್ಚ್ 10 ರಂದು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಪಕ್ಷದ ಎಲ್ಲಾ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಕ್ಷದ ಶಾಸಕರಿಗೆ ಡಿಕೆ ಶಿವಕುಮಾರ್ ಪಾರ್ಟಿ ಆಯೋಜನೆ ಮಾಡಿದ್ದಾರೆ.ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಡಿಕೆ ಶಿವಕುಮಾರ್ ಈ ಒಂದು ಔತಣಕೂಟ ಏರ್ಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಸಚಿವರು ಹಾಗೂ ಪಕ್ಷದ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅಹ್ವಾನ ನೀಡಿದ್ದಾರೆ. ಈ ಒಂದು ಡಿನ್ನರ್ ಪಾರ್ಟಿ ಆಯೋಜನೆ ಮೂಲಕ ವಿಶ್ವಾಸಕ್ಕೆ ಸಳೆಯಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಬಜೆಟ್ ನಂತರ ರಾಜ್ಯದಲ್ಲಿ ಹಲವು ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಸಹ ಹೇಳಲಾಗುತ್ತಿದೆ.




