ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರ. ರಾಜ್ಯ ರಾಜಕೀಯ ಬೆಳವಣಿಗೆ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಖರ್ಗೆಯವರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ. ನವದೆಹಲಿಯ ಖರ್ಗೆ ನಿವಾಸದಲ್ಲಿ ನಿನ್ನೆ ರಾತ್ರಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದಾರೆ.ಈ ವೇಳೆ ಬೆಳಗಾವಿಯಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನದ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.ಇದೇ ವೇಳೆ ರಾಜ್ಯ ರಾಜಕೀಯ ಬೆಳವಣಿಗೆಗಳು, ಕಾಂಗ್ರೆಸ್ ಸರ್ವ ಸದಸ್ಯರ ಸಭೆ, ಸಿಎಲ್ ಪಿ ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆಯೂ ಡಿಸಿಎಂ
ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.