ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ವಿನಯ್ ಗುರೂಜಿ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಆಗುವ ಯೋಗವಿದೆ.
ಸಿಎಂ ಆಗಬೇಕು ಎಂಬುದು ನಮ್ಮ ಇಚ್ಚೆಯಾಗಿದೆ.ಗುರುಗಳ ದಯೆಯಿಂದ ಅವರು ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಕಾಂಗ್ರೆಸ್ ನಾಯಕರ ಸಾಲು ಸಾಲು ಡಿನ್ನರ್ ಮೀಟಿಂಗ್, ಪಕ್ಷದೊಳಗಿನ ಗೊಂದಲಗಳ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ವಿನಯ್ ಗುರೂಜಿ ಹೇಳಿಕೆ ಮಹತ್ವ ಪಡೆದಿದೆ.