ಬೆಂಗಳೂರು : ಬೆಂಗಳೂರು ನಗರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಹೇಳಿದರು.
ದಾಸರಹಳ್ಳಿ ಕ್ಷೇತ್ರದ ಮಾಜಿ ಶಾಸಕ ಆರ್ ಮಂಜುನಾಥ್ ಅವರ ನೇತೃತ್ವದಲ್ಲಿ ನಾಗಸಂದ್ರ ಮೇಟ್ರೊ ಸ್ಟೇಶನ್ ಬಳಿ ಇರುವ ತಮ್ಮ ಕಚೇರಿ ಆವರಣದಲ್ಲಿ ಕಾಂಗ್ರೆಸ್ ಮುಖಂಡ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು.
ಡಿಸಿಎಂ ಡಿಕೆ ಶಿವಕುಮಾರ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದ್ದರು.
ನಂತರ ಮಾತನಾಡಿದ ಅವರು ಬೆಂಗಳೂರು ನಗರವನ್ನು ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು ಮತ್ತು ಕಳೆದ ಹದಿನೈದು ಇಪ್ಪತ್ತು ವರ್ಷಗಳಲ್ಲಿ ಜನ ಸಂಖ್ಯೆಯನ್ನು ಅರವತ್ತು ಎಪ್ಪತ್ತು ಲಕ್ಷದಿಂದ ಒಂದುವರೆ ಕೋಟಿ ಹೆಚ್ಚಾಗಿದೆ ಆರ್ ಹಿನ್ನೆಲೆಯಲ್ಲಿ ಬೆಂಗಳೂರು ಅಭಿವೃದ್ಧಿಗೆ ಮುಂದಿನ ಮೂರು ವರ್ಷಗಳಲ್ಲಿ ಒಂದೂವರೆ ಕೋಟಿ ರೂಪಾಯಿಗಳ ವೆಚ್ಚದ ಯೋಜನೆ ಸಿದ್ದು ಪಡಿಸಿದ್ದೇವೆ ಎಂದರು.
ಬೆಂಗಳೂರು ಬೆಳೆಯುತ್ತಿದ್ದು ಆರ್ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿದ್ದೇವೆ ಇದರಲ್ಲಿ ಎಷ್ಟು ಪಾಲಿಕೆ ಮಾಡಬೇಕು ಎಂದು ಚರ್ಚಿಸಲಾಗಿದೆ ಸಚಿವರು ಶಾಸಕರು ಸಭೆ ಮಾಡಲಾಗಿದೆ ವಾರದಲ್ಲಿ ಮತ್ತೋಂದು ಸಭೆ ಮಾಡಿ ಕೊನೆಯ ನಿರ್ಧಾರ ಮಾಡಿ ಪಾಲಿಕೆ ರಚಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಸಮಾವೇಶ ಉದ್ದೇಶಿಸಿ ಮಾತನಾಡಿದರು.
ಮಾಜಿ ಶಾಸಕ ಆರ್ ಮಂಜುನಾಥ್ ಸರ್ವರಿಗೂ ಸ್ವಾಗತಿಸಿದರು.
ಕಾಂಗ್ರೆಸ್ ಯುವ ಮುಖಂಡ ಹಾಗೂ ಜಯಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಜಗದೀಶ್ ಕಾರ್ಯ ಕ್ರಮ ನಿರೂಪಣೆ ಮಾಡಿದರು.
ಮಾಜಿ ಸಭಾಪತಿ ಬಿ.ಎಲ್ ಶಂಕರ್ ಹಾಗೂ ಸಚಿವ ಕೃಷ್ಣ ಭೈರೇಗೌಡ ಮಾತನಾಡಿದರು.
ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ವಾಜೀದ್, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ, ಕ್ಷೇತ್ರದ ಗ್ಯಾರಂಟಿ ಯೋಜನೆ ಅಧ್ಯಕ್ಷ ಕೆ ಸಿ ವೆಂಕಟೇಶ್,ಮಾಜಿ ನಗರ ಸಭಾ ಅಧ್ಯಕ್ಷ ಕೆ ಸಿ ಅಶೋಕ್, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಿರಿಯ ರಾಜಕಾರಣಿ ಮತ್ತು ಮಾಜಿ ನಗರ ಸಭಾ ಸದಸ್ಯ ಅಬ್ಬಿಗೆರೆ ರಾಜಣ್ಣ, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಾಸ್ಕರ್ ಆಚಾರಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅನುಭವ ಜಗದೀಶ್, ಚರಣ್ ಗೌಡ, ಕಾಂಗ್ರೆಸ್ ಯುವ ಮುಖಂಡ ಕೀರ್ತನ್ ಕುಮಾರ್ ಮಂಜಪ್ಪ ಸೌಂದರ್ಯ, ಬಾಗಲಗುಂಟೆ ವಾರ್ಡಿನ ಕಾಂಗ್ರೆಸ್ ಯುವ ಮುಖಂಡ ಪಾರ್ಥ, ರುದ್ರೇಗೌಡ, ಜಯರಾಂ ನರಸಿಂಹ, ಗೊವೀಂದರಾಜು, ಬಾಬು, ಸೇರಿದಂತೆ ಕಾಂಗ್ರೆಸ್ ಮುಖಂಡರು ಮಹಿಳೆಯರು ಕಾರ್ಯಕರ್ತರು ಮುಂತಾದವರು ಇದ್ದರು.
ವರದಿ : ಅಯ್ಯಣ್ಣ ಮಾಸ್ಟರ್