ನವದೆಹಲಿ : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟ, ಹನಿಟ್ರ್ಯಾಪ್ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಬುಧವಾರವಷ್ಟೇ ಸಚಿವ ಸತೀಶ್ ಜಾರಕಿಹೊಳಿ ಅವರು ಖರ್ಗೆಯನ್ನು ಭೇಟಿಯಾಗಿ ಕೆಲ ಕಾಲ ಮಾತುಕತೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ್ದು, ಕಾಂಗ್ರೆಸ್ನ ಜಿಲ್ಲಾ ಅಧ್ಯಕ್ಷರು ವರಿಷ್ಠರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಕರ್ನಾಟಕ ರಾಜಕೀಯದಲ್ಲಿ, ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆಗಳು ಆಗುತ್ತಿರುವ ಸಂದರ್ಭದಲ್ಲೇ ಈ ಭೇಟಿ ನಡೆದಿದ್ದು, ಹನಿಟ್ರ್ಯಾಪ್ ವಿಚಾರದ ಬಗ್ಗೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ಡಿಕೆ ಹೈಕಮಾಂಡ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸುರ್ಜೆವಾಲಾ, ಖರ್ಗೆ ಮತ್ತು ವೇಣುಗೋಪಾಲ್ ಅವರನ್ನು ಭೇಟಿಯಾಗಲಿದ್ದಾರೆ. ಎಂಎಲ್ಸಿ ನಾಮನಿರ್ದೇಶನ, ಸಂಪುಟ ಪುನಾರಚನೆ, ಹನಿಟ್ರ್ಯಾಪ್ ಪ್ರಕರಣದಲ್ಲಿ ಪಕ್ಷದೊಳಗಿನ ಗೊಂದಲ ಹಾಗೂ ಪವರ್ ಶೇರಿಂಗ್ ವಿಚಾರಗಳ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.