ಚಿಕ್ಕಮಗಳೂರು : ರಾಜ್ಯ ಗುಪ್ತಚರ ಇಲಾಖೆಯಲ್ಲಿ ಕಾನ್ಸ್ ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನ ಕಾರ್ತಿಕೆರೆ ಎಂಬಲ್ಲಿ ನಡೆದಿದೆ.
28 ವರ್ಷದ ಮಧು ಹೀಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ್ದು,ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಧು ಚಿಕ್ಕಮಗಳೂರಿನ ಕಾರ್ತಿಕೆರೆ ಗ್ರಾಮದವರಾಗಿದ್ದು,ಒಂದು ವರ್ಷಗಳಿಂದ ಶಿವಮೊಗ್ಗದಲ್ಲಿ ಗುಪ್ತಚರ ಇಲಾಖೆಯ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ಆದ್ರೆ ಕೇವಲ ಒಂದು ತಿಂಗಳ ಹಿಂದೆಯಷ್ಟೇ ಅವರು ಚಿಕ್ಕಮಗಳೂರಿಗೆ ವರ್ಗಾವಣೆ ಮಾಡಿಸಿಕೊಂಡಿದ್ದರು.
ಆದ್ರೆ ಆ ನಂತರ ತಮ್ಮ ಮನೆಯಲ್ಲಿಯೇ ಡೆತ್ ನೋಟ್ ಬರೆದಿಟ್ಟು ಕಾನ್ಸ್ ಟೇಬಲ್ ಮಧು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಸದ್ಯದ ಮಾಹಿತಿಯ ಪ್ರಕಾರ ಮಧು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಹೀಗಾಗಿ ಚೀಟಿ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.




