ಬೆಂಗಳೂರು: ಮಹಿಳಾ ಸಾಫ್‌್ಟವೇರ್ ಇಂಜಿನಿಯರ್ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ರಾತ್ರಿ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸುಬ್ರಹಣ್ಯ ಲೇಔಟ್‌ನ ವಸತಿ ಸಮುಚ್ಚಯದಲ್ಲಿ ನಡೆದಿದೆ.
ಮಂಗಳೂರು ಮೂಲದ ಶರ್ಮಿಳಾ(34) ಮೃತ ಟೆಕ್ಕಿ. ಅಪಾರ್ಟ್‌ಮೆಂಟ್‌ನ 3ನೇ ಮಹಡಿಯಲ್ಲಿ ಸ್ನೇಹಿತೆಯೊಂದಿಗೆ ವಾಸವಾಗಿದ್ದ ಈಕೆ ಸ್ಥಳೀಯ ಸಾಫ್‌್ಟವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ರಜೆ ಕಾರಣ ಈಕೆಯ ಸ್ನೇಹಿತೆ ಊರಿಗೆ ತೆರಳಿದ್ದ ಕಾರಣ ಒಬ್ಬರೇ ಇದ್ದರು. ಕಳೆದ ರಾತ್ರಿ ಫ್ಲಾಟ್‌ನ ತಮ ಮನೆಯ ಕೊಠಡಿಯಲ್ಲಿದ್ದಾಗ ಸ್ನೇಹಿತೆಯ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮನೆಯ ಕಿಟಕಿ ಬಾಗಿಲುಗಳನ್ನು ಮುಚ್ಚಲಾಗಿತ್ತು.
ಶವವನ್ನು ಆಸ್ಪತ್ರೆಗೆ ಸಾಗಿಸಿ ಪ್ರಕರಣ ದಾಖಲಿಸಿಕೊಂಡ ರಾಮಮೂರ್ತಿನಗರ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.




