Ad imageAd image

ಜುಲೈ 3 ಅಥವಾ 4ರಂದು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧಾರ 

Bharath Vaibhav
R ASHOK
WhatsApp Group Join Now
Telegram Group Join Now

ಬೆಳಗಾವಿ : ರಾಜ್ಯದಲ್ಲಿ ಇತ್ತೀಚಿಗೆ ಪೆಟ್ರೋಲ್ ಡೀಸೆಲ್ ಬಳಿಕ ಇದೀಗ KMF ಹಾಲಿನ ದರ ಏರಿಕೆ ಮಾಡಿದೆ. ಇದನ್ನು ವಿರೋಧಿಸಿ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ಅವರು ಹಾಕಿದ್ದು ಜುಲೈ 3 ಅಥವಾ 4ರಂದು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿಳಿಸಿದರು.

ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಬೆಲೆ ಏರಿಕೆ ಖಂಡಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ. ಜುಲೈ 3 ಅಥವಾ 4ರಂದು ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ಕರ್ನಾಟಕ ಸರ್ಕಾರ ಒಂದು ರೀತಿ ಹುಚ್ಚರ ಸಂತೆಯಾಗಿದೆ. ಮೊನ್ನೆಯಷ್ಟೇ ಪೆಟ್ರೋಲ್, ಡೀಸೆಲ್‌ ದರ ಏರಿಕೆ ಮಾಡಿದ್ದಾರೆ.

ಈಗ ಹಾಲಿನ ದರ ಲೀಟರ್​ಗೆ 2 ರೂಪಾಯಿ ಏರಿಕೆ ಮಾಡಿದ್ದಾರೆ. ಒಂದೇ ವರ್ಷದಲ್ಲಿ ಎರಡು ಬಾರಿ ಹಾಲಿನ ದರ ಏರಿಕೆ ಮಾಡಿದ್ದಾರೆ. ಗ್ಯಾರಂಟಿಗೆ ಹಣ ಹೊಂದಿಸಲು ಆಗದೇ ಬೆಲೆ ಏರಿಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅವೈಜ್ಞಾನಿಕವಾಗಿ, ಯಾವುದೇ ಮುಂದಾಲೋಚನೆ ಇಲ್ಲದೆ ಗ್ಯಾರಂಟಿ ತಂದು ಈಗ ಗ್ಯಾರಂಟಿಗೆ ಹಣ ಹೊಂದಿಸಲು ಆಗದೇ ಬೆಲೆ ಏರಿಕೆ ಮಾಡುತ್ತಿದ್ದಾರೆ.

ನಮ್ಮ ಸರ್ಕಾರ ಇದ್ದಾಗ ಒಂದು ರೂಪಾಯಿ ಜಾಸ್ತಿ ಮಾಡಿದಾಗ ಹೆಣದ ಮೆರವಣಿಗೆ ಮಾಡಿದ್ರಿ. ಸರ್ಕಾರ ದೀವಾಳಿಯಾಗಿದೆ, ಹಣ ಇಲ್ಲ ಪಾಪಾರ್ ಆಗಿದೆ. ಸಂಬಳ ಕೊಡಲು ಹಣವಿಲ್ಲ, ಹಣಕಾಸು ಇಲಾಖೆ ಪೆಟ್ರೋಲ್, ಡಿಸೇಲ್ ಏರಿಕೆ ಮಾಡಿ ಎಂದು ಹೇಳಿದೆ.

ಅಧಿಕಾರಕ್ಕೆ ಬಂದು ಒಂದೇ ವರ್ಷದಲ್ಲಿ ಕೆಟ್ಟದಾಗಿ ನಡೆದುಕೊಂಡಿದೆ. ಹಾಲಿನ ದರ, ತೈಲ ದರ ಹೆಚ್ಚಳ ವಿರೋಧಿಸಿ ಹೋರಾಟ ಮಾಡ್ತೀವಿ. ಜೈಶ್ರೀರಾಮ ಘೋಷಣೆ ಕೂಗಿದರೆ ಚಾಕುವಿನಿಂದ ಹಲ್ಲೆ ಮಾಡ್ತಾರೆ. ಮಂಡ್ಯದಲ್ಲಿ ಹನುಮ ಧ್ವಜದ ವಿಚಾರಕ್ಕೆ ಕಿರುಕುಳ ಕೊಡಲಾಗುತ್ತಿದೆ. ಅಧಿವೇಶನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪ್ರಸ್ತಾಪ ಬಂದ್ರೆ ಮಾತಾಡ್ತೀವಿ ಹೇಳಿದರು.

ತುಘಲಕ್ ರೀತಿ ಕಾಂಗ್ರೆಸ್ ಸರ್ಕಾರವನ್ನು ನಡೆಸುತ್ತಿದೆ. ಈ ತಿಂಗಳು, ಮುಂದಿನ ತಿಂಗಳು ಸರ್ಕಾರದ ಬಳಿ ಹಣವೇ ಇಲ್ಲ. ಇದೇ ವೇಳೆ ವೇತನ ಪರಿಷ್ಕರಣೆ ಕೂಡ ಕ್ಯಾಬಿನೆಟ್ ಬಳಿ ಬಂದಿದೆ.

ಐದಲ್ಲ ಐವತ್ತು ಗ್ಯಾರಂಟಿ ಕೊಡಿ, ಆದರೆ ವೈಜ್ಞಾನಿಕವಾಗಿ ಮಾಡಿ. ಚುನಾವಣೆಯಲ್ಲಿ ಜನ ನಿಮ್ಮ ಮುಖಕ್ಕೆ ಮಂಗಳಾರತಿ ಎತ್ತಿದ್ದಾರೆ. ಜನ ಇಷ್ಟು ಛೀಮಾರಿ ಹಾಕಿದ್ರೂ ನಿಮಗೆ ನಾಚಿಗೆ ಆಗಿಲ್ಲ. ಎಂಪಿ ಚುನಾವಣೆಯಲ್ಲಿ ಮತ ಹಾಕಿಲ್ಲ ಎಂದು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

 

 

WhatsApp Group Join Now
Telegram Group Join Now
Share This Article
error: Content is protected !!